ಮಡಿಕೇರಿ: ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 8 ಮತ್ತು 9ರಂದು ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಹಾಗೂ ಶಾಲಾ-ಕಾಲೇಜುಗಳಿಗೆ ರಸ್ತೆ ವಿಸ್ತರಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಆದೇಶ ನೀಡಿದ್ದಾರೆ.
ಮತ್ತೊಂದೆಡೆ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆಯಲ್ಲಿ ತಮ್ಮನ್ನು ಕಾಪಾಡುವಂತೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಮಳೆ ಗಂಗೆ ಪೂಜೆಯನ್ನು ಜನ ಸಲ್ಲಿಸಿದ್ದಾರೆ.
ಕೇಂದ್ರ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಆಗಸ್ಟ್ 8 ಮತ್ತು 9 ರಂದು ಭಾರಿ ಮಳೆ ಬೀಳಲಿದೆ ಎಂದು ಎಚ್ವರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಿತ್ತು. ಈಗಾಗಲೇ ಮಡಿಕೇರಿ ಸೇರಿದಂತೆ, ಮಾಕುಟ್ಟ, ವಿರಾಜಪೇಟೆ, ಸೋಮವಾರಪೇಟೆ, ನಾಪೋಕ್ಲು, ಭಾಗಮಂಡಲ ಹಾಗೂ ಬ್ರಹ್ಮಗಿರಿ ವ್ಯಾಪ್ತಿಯಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಕಾವೇರಿ ಉಪನದಿಗಳಲ್ಲೂ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಅಲ್ಲದೆ, ವಿರಾಜಪೇಟೆ ತಾಲೂಕಿನ ಮಾಕುಟ್ಟಾ ಬಳಿ ಕರ್ನಾಟಕ-ಕೇರಳ ಸಂಪರ್ಕಿಸುವ ರಾಜ್ಯ ಹೆದ್ದಾರಿಯ ತಡೆಗೋಡೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮತ್ತೆರಡು ದಿನಗಳು ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಿಸಲಾಗಿದೆ.