ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ರೆಡ್ ಅಲರ್ಟ್... ತುರ್ತು ಟೋಲ್​ ಫ್ರೀ ನಂಬರ್​ ನೀಡಿದ ಜಿಲ್ಲಾಡಳಿತ - kannada news

ಕೊಡಗು ಜಿಲ್ಲೆಯಾದ್ಯಂತ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ ಸಹಾಯವಾಣಿ 08272 - 221077 ತುರ್ತು ಟೋಲ್ ಫ್ರೀ ನಂಬರ್ ಸಂಪರ್ಕಿಸುವಂತೆ ಮನವಿ ಮಾಡಿದೆ.

ಕೊಡಗಿನಲ್ಲಿ ಮುಂದುವರೆದ ಮಳೆ; ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

By

Published : Jul 19, 2019, 7:49 PM IST

ಮಡಿಕೇರಿ:ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ‌ಈ ಮೊದಲು ಆರೆಂಜ್ ಅಲರ್ಟ್ ಘೋಷಿಸಿದ್ದ ಜಿಲ್ಲಾಡಳಿತ ಇಂದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ. ಕೇಂದ್ರ ಹವಾಮಾನ ಇಲಾಖೆ ಜುಲೈ 18 ರಿಂದ 23 ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿದ ಬೆನ್ನಲ್ಲೇ ಈ ಘೋಷಣೆ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ

ಅಲ್ಲದೆ, 204.5 ಎಂಎಂ ಮಳೆ ಬೀಳುವ ಸಾಧ್ಯತೆ ಎಂಬ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಾರ್ವಜನಿಕರು ಹಾಗೂ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ‌ಎಚ್ಚರದಿಂದ ಇರಲು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಸೂಚನೆ ನೀಡಿದ್ದಾರೆ.

ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ ಸಹಾಯವಾಣಿ 08272 - 221077 ತುರ್ತು ಟೋಲ್ ಫ್ರೀ ನಂಬರ್ ಸಂಪರ್ಕಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ABOUT THE AUTHOR

...view details