ಕೊಡಗು: ಜುಲೈ 5ರ ವರೆಗೆ ಜಿಲ್ಲೆಯ ಪ್ರವಾಸೋದ್ಯಮ ಸ್ಥಳಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಈಶ್ವರ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ ದಿನಗಳಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಬರುತ್ತಿರುವ ದೂರುಗಳು ಕೇಳಿ ಬಂದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳಲ್ಲಿ ಪ್ರವಾಸಿಗರಿಗೆ ಅವಕಾಶ ನೀಡಿದ ದೂರುಗಳು ಇದ್ದಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ 1077 ಗೆ ಕರೆ ಮಾಡಬಹುದಾಗಿದೆ. ಪ್ರವಾಸೋದ್ಯಮ, ಪೊಲೀಸ್, ಕಂದಾಯ ಇಲಾಖೆಗಳ ಕಾರ್ಯಪಡೆ ರಚಿಸಿದ್ದು, ಈಗಾಗಲೇ 3 ಹೋಂ ಸ್ಟೇ ಮೇಲೆ ದಾಳಿ ಮಾಡಿ ಎಫ್ಐಆರ್ ದಾಖಲಿಸಲಾಗಿದೆ. 1 ರೆಸಾರ್ಟ್ ಮೇಲೂ ದೂರು ಬಂದಿದ್ದು, ಪರಿಶೀಲಿಸಲಾಗುತ್ತದೆ ಎಂದರು.