ಮಡಿಕೇರಿ(ಕೊಡಗು): ಡೆತ್‌ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಮಡಿಕೇರಿ ನಗರದ ಉಕ್ಕುಡ ಎಂಬಲ್ಲಿ ನಡೆದಿದೆ. ಉಕ್ಕುಡ ನಿವಾಸಿ ಸಂದೇಶ್ (38) ಕಾಣೆಯಾದವರು.
ಇದಕ್ಕೂ ಮುನ್ನ ಬರೆದಿರುವ ಪತ್ರದಲ್ಲಿ, ಮಹಿಳೆಯೊಬ್ಬಳು ನನ್ನನ್ನು ಹನಿಟ್ರ್ಯಾಪ್ ಮಾಡಿರುವುದಾಗಿ ಹೇಳಿದ್ದಾರೆ. ಈ ಕುರಿತಾಗಿ ಪೊಲೀಸ್ ಸಿಬ್ಬಂದಿಯೊಬ್ಬರು ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಮಹಿಳೆ ಮತ್ತು ಪೊಲೀಸ್ ಸಿಬ್ಬಂದಿಯ ಹೆಸರನ್ನು ಉಲ್ಲೇಖಿಸಿದ್ದಾರೆ. ಬಳಿಕ ತಾಯಿಗೆ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಿಂದ ತೆರಳಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂದೇಶ್ ಅವರ ತಾಯಿ ಪ್ರತಿಕ್ರಿಯಿಸಿ, "ನನ್ನ ಮಗ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ತೆರಳಿದ್ದು, ನಾಪತ್ತೆಯಾಗಿದ್ದಾನೆ. ಮಗನನ್ನು ಹುಡುಕಿಕೊಡಿ" ಎಂದು ಕಣ್ಣೀರು ಹಾಕಿದರು.