ಕರ್ನಾಟಕ

karnataka

ETV Bharat / state

ಮಾರ್ಚ್​ 31ರವರೆಗೆ ಕೊಡಗಿನಲ್ಲಿ ಐಪಿಸಿ144/3 ಸೆಕ್ಷನ್​ ಜಾರಿ: ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್

ಕೊಡಗು ಜಿಲ್ಲೆಯಲ್ಲಿ ಮಾರ್ಚ್ 31ರವರೆಗೆ ಐಪಿಸಿ144/3 ಸೆಕ್ಷನ್​ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಹೇಳಿದ್ದಾರೆ.

DC Anis.K Joy s
ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್

By

Published : Mar 22, 2020, 9:21 PM IST

ಕೊಡಗು:ಜಿಲ್ಲೆಯಲ್ಲಿ ಈಗಾಗಲೇ ರಾತ್ರಿ 12 ಗಂಟೆವರೆಗೆ ಐಪಿಸಿ ಸೆಕ್ಷನ್​ 144 ಜಾರಿಯಲ್ಲಿದ್ದು, ಅದು ಮಾರ್ಚ್ 31ರವರೆಗೆ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಹೇಳಿದರು.

ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ 144 ಸೆಕ್ಷನ್​​ ಮುಂದುವರೆಯಲಿದೆ. ಸಾರ್ವಜನಿಕರಿಗೆ ಅಗತ್ಯವಾದ ದಿನ ಬಳಕೆಯ ವಸ್ತುಗಳಾದ ದಿನಸಿ ಅಂಗಡಿ, ಹಾಲು, ಹಣ್ಣು ತರಕಾರಿ‌, ಬ್ಯಾಂಕ್‌ಗಳು, ಎಟಿಎಂ, ಇಂದಿರಾ ಕ್ಯಾಂಟೀನ್ ತೆರೆದಿರುತ್ತವೆ. ಹೋಟೆಲ್, ಹೋಂ ಸ್ಟೇಗಳು, ಲಿಕ್ಕರ್ ಶಾಪ್‌ಗಳು ಹಾಗೂ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳೂ ಬಂದ್ ಆಗಲಿವೆ. ಜೊತೆಗೆ ಜಿಲ್ಲೆಯ ಗಡಿ ಭಾಗಗಳನ್ನು ಬಂದ್ ಮಾಡಲಾಗುವುದು ಎಂದರು.

ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿದ್ದ 8 ಜನರಲ್ಲಿ ನಾಲ್ವರಿಗೆ ನೆಗೆಟೀವ್ ವರದಿ ಬಂದಿದ್ದು, ಇನ್ನೂ ನಾಲ್ಕು ಜನರ ವರದಿಯನ್ನು ನಿರೀಕ್ಷಿಸುತ್ತಿದ್ದೇವೆ. ವಿದೇಶಗಳಿಂದ ವಾಪಸಾಗಿರುವ 247 ಮಂದಿಯನ್ನು ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.‌ ಕೊರೊನಾ ಪೀಡಿತನ ಜೊತೆ ರಾಜಹಂಸ ಬಸ್ಸಿನಲ್ಲಿ ಪ್ರಯಾಣಿಸಿದ್ದವರ ಬಗ್ಗೆ ಸ್ಟೇಟ್ ಸರ್ವಲೆನ್ಸ್ ಟೀಂ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕೊರೊನಾ ಭೀತಿ ಇರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸರ್ಕಾರಿ ನೌಕರರನ್ನು ಅನಿವಾರ್ಯ ಪರಿಸ್ಥಿಯಲ್ಲಿ ಇರಿಸಬೇಕಾದ್ದರಿಂದ ಯಾರೂ ಜಿಲ್ಲೆ ಬಿಟ್ಟು ಹೊರಗೆ ಹೋಗುವುದು ಬೇಡ ಎಂದು ಅವರು ಹೇಳಿದರು.

ವಿದೇಶಗಳಿಂದ ಮರಳಿದವರ ಕೈಗೆ ಮುದ್ರೆ ಹಾಕಲಾಗುತ್ತಿದೆ. ಗಾಳಿಬೀಡು ಗ್ರಾಮದಲ್ಲಿ ಒಂದು ಪ್ರಕರಣ ಬಂದಿದ್ದರಿಂದ ಜಿಲ್ಲಾಡಳಿತವೇ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಇಂತಹ ವ್ಯವಸ್ಥೆಯನ್ನು ಜಿಲ್ಲಾಡಳಿತ ಟಾಸ್ಕ್‌ಫೋರ್ಸ್ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಜಿಲ್ಲೆಯಲ್ಲಿ ವೈದ್ಯರು ಹಾಗೂ ನರ್ಸ್‌ಗಳ ಕೊರತೆ ಎದುರಾಗಿದ್ದು, ಮೆಡಿಕಲ್ ಹಾಗೂ ಪ್ಯಾರಾ ಮೆಡಿಕಲ್‌ ಕೋರ್ಸ್ ಮುಗಿಸಿ ಮನೆಯಲ್ಲೇ ಇರುವವರು ಸ್ವಯಂ ಪ್ರೇರಿತರಾಗಿ ಬಂದು ಸೇವೆಗೆ ಮುಂದಾಗಬೇಕು ಎಂದು ಮನವಿ ಮಾಡಿದ್ರು.

ABOUT THE AUTHOR

...view details