ಕೊಡಗು: ಸಮಾಜಘಾತುಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿರುವ ಎಸ್‌ಡಿಪಿಐ ಕಾರ್ಯಕರ್ತರನ್ನು ಸರ್ಕಾರ ಬಂಧಿಸಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಆಗ್ರಹಿಸಿದ್ದಾರೆ.
ಸಮಾಜಘಾತುಕ ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಬೇಕು: ಶಾಸಕ ಕೆ.ಜಿ.ಬೋಪಯ್ಯ - SDPI activists
ಸಮಾಜಘಾತುಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿರುವವರನ್ನು ಬಂಧಿಸಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರದ ಸಿಎಎ ಕಾಯ್ದೆ ಬಗ್ಗೆ ಅರಿವು ಮೂಡಿಸುತ್ತಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಂದಸ ತೇಜಸ್ವಿ ಸೂರ್ಯ ಹಾಗೂ ಯುವ ಬ್ರಿಗೇಡ್ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಇಬ್ಬರ ಹತ್ಯೆಗೆ ಸಂಚು ರೂಪಿಸಿದ್ದ ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದ್ದಾರೆ.
ಪೋಲೀಸರ ವಶದಲ್ಲಿರುವ ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರು ಹಿಂದೂ ಸಮಾಜಕ್ಕೆ ಮಾರಕರಾಗಿದ್ದಾರೆ. ಈ ಬಗ್ಗೆ ಸರ್ಕಾರ ನಿರ್ದಾಕ್ಷಿಣ್ಯ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪೊಲೀಸರ ಕಾರ್ಯಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ಪೊಲೀಸರು ಎನ್‌ಐಎ ಅವರ ಸಹಕಾರ ಪಡೆದು ಸಂಪೂರ್ಣ ತನಿಖೆ ನಡೆಸಬೇಕು ಎಂದು ಹೇಳಿದರು.