ಕರ್ನಾಟಕ

karnataka

ETV Bharat / state

ವಿರಾಜಪೇಟೆ: ಕೊರೊನಾಗೆ ಯೋಧ ಬಲಿ - soldier death

ಕೇರಳದ ತಿರುವಂತಪುರದಲ್ಲಿ ಕೊರೊನಾದಿಂದಾಗಿ ಯೋಧರೊಬ್ಬರು ಮೃತಪಟ್ಟಿದ್ದಾರೆ. ಮಜೀದ್ (50) ಸಾವನ್ನಪ್ಪಿದ ಯೋಧ.

soldier death
ಯೋಧ ಸಾವು

By

Published : Sep 24, 2020, 11:01 PM IST

ವಿರಾಜಪೇಟೆ/ಕೊಡಗು:ಕೊರೊನಾದಿಂದಾಗಿ ಕರ್ತವ್ಯದಲ್ಲಿರುವಾಗಲೇ ಯೋಧರೊಬ್ಬರು ಮೃತಪಟ್ಟ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ. ವಿರಾಜಪೇಟೆಯ ನಲ್ವತೊಕ್ಲುವಿನ ಮಜೀದ್ (50) ಸಾವನ್ನಪ್ಪಿದ ಯೋಧ.

ಇವರಿಗೆ ಇದೇ ತಿಂಗಳ ಮೊದಲ ವಾರದಲ್ಲಿ ಕೊರೊನಾ ಸೋಂಕು ದೃಢಪಟ್ಟ ಕಾರಣ, ತಿರುವನಂತಪುರಂನ ಮೆಡಿಕಲ್ ಕಾಲೇಜಿನಲ್ಲಿರುವ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತಜ್ಞ ವೈದ್ಯರ ತಂಡ ನಿರಂತರವಾಗಿ ನೀಡಿದ ಚಿಕಿತ್ಸೆ ಆರಂಭದಲ್ಲಿ ಫಲ ಕಾಣದಿದ್ದಾಗ ಪ್ಲಾಸ್ಮಾ ತೆರಪಿ ಚಿಕಿತ್ಸೆ ನೀಡಲಾಯಿತು.

ಇದರಿಂದ ಚೇತರಿಸಿಕೊಳ್ಳುವ ಹಂತದಲ್ಲಿದ್ದ ಮಜೀದ್ ಅವರು ತಮ್ಮ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯಾವುದೇ ಉನ್ನತ ಮಟ್ಟದ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಬೆಳಿಗ್ಗೆ 7 ಗಂಟೆಗೆ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಕೋವಿಡ್ ಆಸ್ಪತ್ರೆಯಲ್ಲಿ ನಿಧನರಾದರು.

ಭಾರತೀಯ ಗಡಿ ಭದ್ರತಾ ಪಡೆ (ಬಿ.ಎಸ್.ಎಫ್)ಯಲ್ಲಿ 30 ವರ್ಷಗಳ ಸುದೀರ್ಘವಾದ ದೇಶಸೇವೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದ ಇವರು ಕರ್ತವ್ಯದಲ್ಲಿರುವಾಗಲೇ ಮಹಾಮಾರಿ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.

ಮೃತ ಯೋಧ ಮಜೀದ್ ಅವರಿಗೆ ಕೋವಿಡ್ ಬಾಧಿಸಿದ್ದ ಕಾರಣ ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲು ಸಾಧ್ಯವಾಗುತ್ತಿಲ್ಲ. ತಿರುವನಂತಪುರಂನಲ್ಲೇ ಮೃತರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಗುರುವಾರ ಮಧ್ಯಾಹ್ನದ ವೇಳೆಗೆ ಅವರ ಅಂತ್ಯಕ್ರಿಯೆ ನಡೆದಿದೆ.

ABOUT THE AUTHOR

...view details