ಮಡಿಕೇರಿ: ಮನುಷ್ಯನ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಕ್ರೀಡೆ ಸ್ಫೂರ್ತಿದಾಯಕ ಎಂದು ಅಂತಾರಾಷ್ಟ್ರೀಯ ಸ್ಕ್ವ್ಯಾಷ್ ಆಟಗಾರ್ತಿ ಜೋಶ್ನಾ ಚಿನ್ನಪ್ಪ ಹೇಳಿದರು. ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಪಾಲಕರು ತಮ್ಮ ಮಕ್ಕಳ ಆದ್ಯತೆಗೆ ತಕ್ಕಂತೆ ವಿದ್ಯೆಯ ಜತೆಗೆ ಕ್ರೀಡೆಗೂ ಮಹತ್ವ ನೀಡುವಂತಾಗಬೇಕು. ಕ್ರೀಡೆಯಲ್ಲಿ ಮಕ್ಕಳಿಗೆ ಹೆಚ್ಚಿನ ಒಲವಿದ್ದರೆ ಅದನ್ನು ವಿದ್ಯೆ ಜತೆಗೆ ಪೋಷಿಸಿ ಪ್ರೋತ್ಸಾಹ ನೀಡಬೇಕು. ಟೀಮ್ ವರ್ಕ್, ಸಮರ್ಪಣಾ ಭಾವ, ಕಠಿಣ ಪರಿಶ್ರಮ ಮತ್ತು ಬದ್ಧತೆಯನ್ನು ಕ್ರೀಡೆ ಬೆಳೆಸುತ್ತದೆ. ಹಾಗಾಗಿ ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.