ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿತನಿರುವ ಗ್ರಾಮದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ: ಸೋಮವಾರಪೇಟೆ ಡಿಡಿಪಿಐ

ಸೋಮವಾರಪೇಟೆ ತಾಲೂಕಿನ ಗ್ರಾಮದಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಆ ಗ್ರಾಮದದಲ್ಲಿ ಎಸ್ಎಸ್​ಎಲ್​ಸಿ ಪರೀಕ್ಷೆ ಬರೆಯಬೇಕಿರುವ ಮಕ್ಕಳು ಇರುವ ಕಾರಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೊ ಹೇಳಿದ್ದಾರೆ.

dfsd
ಕೊರೊನಾ ಸೋಂಕಿತನಿರುವ ಗ್ರಾಮದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ

By

Published : Jun 23, 2020, 3:54 PM IST

ಸೋಮವಾರಪೇಟೆ/ಕೊಡಗು:ಸೋಂಕಿತನ ಜೊತೆಗೆ ಮಕ್ಕಳು ಪ್ರಾಥಮಿಕ ಸಂಪರ್ಕದಲ್ಲಿ ಇಲ್ಲದಿರುವುದರಿಂದ ಸೀಲ್‌ ಡೌನ್‌ ಪ್ರದೇಶದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೊ ತಿಳಿಸಿದ್ದಾರೆ.

ಕೊರೊನಾ ಸೋಂಕಿತನಿರುವ ಗ್ರಾಮದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ

ತಾಲೂಕಿನ ಶನಿವಾರ ಸಂತೆ ಹೋಬಳಿಯ ಕೊರೊನಾ ಸೋಂಕಿತನಿರುವ ಗ್ರಾಮದಲ್ಲಿ ಇಬ್ಬರು ಎಸ್​ಎಸ್​‌ಎಲ್​ಸಿ ವಿದ್ಯಾರ್ಥಿಗಳಿದ್ದಾರೆ. ಇವರು ಸೋಂಕಿತನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿ ಇಲ್ಲದಿರುವುದರಿಂದ ಆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಪ್ರತ್ಯೇಕ ವಿಶೇಷ ಕೊಠಡಿಯಲ್ಲಿ ಈ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಇಲಾಖೆ ವ್ಯವಸ್ಥೆ ಮಾಡಿದೆ. ಒಂದು ವೇಳೆ ಜೂನ್ 25ರಂದು ಸಾಧ್ಯವಾಗದೇ ಇದ್ದರೆ ಜುಲೈ ಅಥವಾ ಆಗಸ್ಟ್‌ನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಹೊಸದಾಗಿಯೇ ಪರೀಕ್ಷೆ ಬರೆಯುವಂತೆ ಹೇಳಿದ್ದೇವೆ. ಆದರೆ ವಿದ್ಯಾರ್ಥಿಗಳು ಒಪ್ಪದ ಕಾರಣ ಜೂನ್ 25ರಂದು ಸ್ಯಾನಿಟೈಸರ್ ಹಾಗೂ ಎನ್‌-95 ಮಾಸ್ಕ್ ಕೊಟ್ಟು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದರು.

ABOUT THE AUTHOR

...view details