ಕೊಡಗು:ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಹೈಪರ್ ಕಮಿಟಿ ರಚಿಸಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಸೋಂಕಿತರ ಅಂತ್ಯಕ್ರಿಯೆಯನ್ನು ಗೌರವಯುತವಾಗಿ ನಡೆಸಲಾಗುವುದು: ಎಸ್.ಟಿ. ಸೋಮಶೇಖರ್ - ಕೊಡಗು ಸುದ್ದಿ
ಕೊರೊನಾ ಸೋಂಕಿನಿಂದ ಮೃತಪಟ್ಟ ದೇಹಗಳನ್ನು ಅಮಾನವೀಯ ರೀತಿಯಲ್ಲಿ ಅಂತ್ಯ ಸಂಸ್ಕಾರ ಮಾಡಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಅಂತ್ಯ ಸಂಸ್ಕಾರಕ್ಕೆ ಬೆಂಗಳೂರು ಸೇರಿದಂತೆ ಹಲವೆಡೆ ಜಾಗ ಗುರುತಿಸಲು ರಾಜ್ಯ ಸರ್ಕಾರ ಹೇಳಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಮೃತದೇಹಗಳನ್ನು ಅಮಾನವೀಯ ರೀತಿಯಲ್ಲಿ ಅಂತ್ಯ ಸಂಸ್ಕಾರ ಮಾಡಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಅಂತ್ಯ ಸಂಸ್ಕಾರಕ್ಕೆ ಬೆಂಗಳೂರು ಸೇರಿದಂತೆ ಹಲವೆಡೆ ಜಾಗ ಗುರುತಿಸಲು ರಾಜ್ಯ ಸರ್ಕಾರ ಹೇಳಿದೆ. ಇನ್ಮುಂದೆ ಗೌರವಯುತವಾಗಿ ಅಂತ್ಯಕ್ರಿಯೆ ಮಾಡಲಾಗುವುದು ಎಂದು ತಿಳಿಸಿದರು.
ಈ ಬಗ್ಗೆ ಮುಖ್ಯಮಂತ್ರಿ ಅವರು ನಿನ್ನೆಯೇ ಸಭೆ ಮಾಡಿ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಮಿಟಿ 24 ಗಂಟೆಯೂ ಜವಾಬ್ದಾರಿಯಿಂದ ಮಾನಿಟರ್ ಮಾಡಲಿದೆ ಎಂದು ಸಚಿವರು ಹೇಳಿದರು.