ಕೊಡಗು: ಪೋಷಕರು, ಮಕ್ಕಳು ಹಾಗೂ ಶಿಕ್ಷಕರಿಗೆ ಕೋವಿಡ್ ಪರೀಕ್ಷೆ ಮಾಡಿದ ಬಳಿಕ ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಕೋವಿಡ್ ಪರೀಕ್ಷೆ ಬಳಿಕ ಶಾಲೆಗಳನ್ನು ಆರಂಭಿಸುವುದು ಸೂಕ್ತ: ಸಂಸದ ಪ್ರತಾಪ ಸಿಂಹ - ಪ್ರತಾಪ ಸಿಂಹ ಹೇಳಿಕೆ
ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಫೋನ್ ಅಥವಾ ಲ್ಯಾಪ್‌ಟಾಪ್ ಇರುವುದಿಲ್ಲ. ಹಾಗಾಗಿ, ಜುಲೈನಲ್ಲಿ ಶಾಲೆಗಳನ್ನು ಆರಂಭಿಸುವುದು ಒಳ್ಳೆಯದು ಎಂದು ಪ್ರತಾಪ್ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಂಸದ ಪ್ರತಾಪ ಸಿಂಹ
ಸೋಮವಾರಪೇಟೆ ತಾಲೂಕಿನ ಜಂಬೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆನ್‌ಲೈನ್ ಮೂಲಕ ಕಲಿಕೆ ಸಾಧ್ಯವಿಲ್ಲ. ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಲ್ಲಿ ಸ್ಮಾರ್ಟ್‌ಫೋನ್ ಅಥವಾ ಲ್ಯಾಪ್‌ಟಾಪ್ ಇರುವುದಿಲ್ಲ. ಅಲ್ಲದೇ ಶಾಲೆಯಲ್ಲಿ ಕಲಿಯುವ ರೀತಿ ಆನ್‌ಲೈನ್ ಕಲಿಕೆ ಸಾಧ್ಯವಿಲ್ಲ. ಹೀಗಾಗಿ ಜುಲೈನಲ್ಲಿ ಶಾಲೆಗಳನ್ನು ಆರಂಭಿಸುವುದು ಒಳಿತು. ಶಾಲೆಗಳನ್ನು ತೆರೆದ ಬಳಿಕ ಕೇಂದ್ರದ ಮಾರ್ಗಸೂಚಿಗಳನ್ನು ಅನುಸರಿಸಬೇಕಿದೆ ಎಂದರು.