ಕರ್ನಾಟಕ

karnataka

ಕೊಡಗು ಜಿಲ್ಲೆಯಾದ್ಯಂತ 27 ಕೇಂದ್ರಗಳಲ್ಲಿ ‌ಎಸ್ಎಸ್ಎಲ್​ಸಿ ಪರೀಕ್ಷೆ

ಪ್ರತೀ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಅಂತರದಲ್ಲೇ ಪೋಷಕರನ್ನು ತಡೆಹಿಡಿಯಲಾಗಿದೆ. ಹೀಗಾಗಿ ನೂಕು ನುಗ್ಗಲು ಆಗದಂತೆ ಕ್ರಮ ವಹಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿದ್ದಂತೆ ವಿದ್ಯಾರ್ಥಿಗಳಿಗೆ ಸಾನಿಟೈಸರ್ ನೀಡಲಾಗಿದೆ.

By

Published : Jun 25, 2020, 12:21 PM IST

Published : Jun 25, 2020, 12:21 PM IST

ಎಸ್ಎಸ್ಎಲ್ ಸಿ ಪರೀಕ್ಷೆ  ಆರಂಭ
ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ

ಕೊಡಗು: ಇಂದಿನಿಂದ ಜಿಲ್ಲೆಯಲ್ಲಿ ‌ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಿದ್ದು, ಒಟ್ಟು 27 ಪರೀಕ್ಷಾ ಕೇಂದ್ರಗಳಲ್ಲಿ 7,149 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುತ್ತಿದೆ.

ಪ್ರತೀ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಅಂತರದಲ್ಲೇ ಪೋಷಕರನ್ನು ತಡೆಹಿಡಿಯಲಾಗಿದೆ. ಹೀಗಾಗಿ ನೂಕು ನುಗ್ಗಲು ಆಗದಂತೆ ಕ್ರಮ ವಹಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿದ್ದಂತೆ ವಿದ್ಯಾರ್ಥಿಗಳ ಕೈಗೆ ಸಾನಿಟೈಸರ್ ಹಾಕಲಾಯಿತು. ಅಲ್ಲದೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಎಚ್ಚರ ವಹಿಸಲಾಗಿದೆ.

ಮುಂಜಾಗ್ರತ ಕ್ರಮಗಳೊಂದಿಗೆ ಎಸ್ಎಸ್ಎಲ್ ಸಿ ಪರೀಕ್ಷೆ

ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತು ತಮ್ಮ ತಮ್ಮ ಕೊಠಡಿಗಳಿಗೆ ಹೋಗುವಂತೆ ಕೂಡ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಯೇ ನೂಕು ನುಗ್ಗಲು ಆಗದಂತೆ ಮಾರ್ಕ್ ಗಳನ್ನು ಮಾಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿತ್ತು. ಪ್ರತೀ ವಿದ್ಯಾರ್ಥಿಯೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಲಾಗಿದೆ.

ABOUT THE AUTHOR

...view details