ಕರ್ನಾಟಕ

karnataka

ETV Bharat / state

ಬೆಂಗಳೂರಿಗಿಂತ ಕೋಲಾರ, ರಾಯಚೂರಿನಲ್ಲಿ ಹೆಚ್ಚು ಡ್ರಗ್​ ಅಡಿಕ್ಟ್​ಗಳು: ಡಿಜಿಪಿ ಪ್ರವೀಣ್ ಸೂದ್..!

ರಾಜ್ಯದಲ್ಲಿ ಮಾದಕ ದ್ರವ್ಯ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕಿನಿಂದ ಸಾಗಿದ್ದು, ಡ್ರಗ್ಸ್ ದಂಧೆಕೋರರ ಹೆಡೆಮುರಿ ಕಟ್ಟಲು ಪೊಲೀಸ್​ ಇಲಾಖೆ ಸನ್ನದ್ಧವಾಗಿದೆ ಎಂದು ಕೊಡಗಿನಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಮಡಿಕೇರಿ
ಮಡಿಕೇರಿ

By

Published : Oct 3, 2020, 3:10 PM IST

ಕೊಡಗು: ಚಿತ್ರರಂಗ ಕಲಾವಿದರು ಸೇರಿದಂತೆ ಡ್ರಗ್ಸ್ ಜಾಲದಲ್ಲಿ ತೊಡಗಿಸಿಕೊಂಡಿರುವವರ ವಿರುದ್ದ ಕಠಿಣ ಕಾನೂನು ಕ್ರಮ ಮುಂದುವರೆಯುತ್ತದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಹೇಳಿದ್ದಾರೆ.

ಮಡಿಕೇರಿ

ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,‌ ಈಗಾಗಲೆ ಕೋಲಾರ, ರಾಯಚೂರು ಜಿಲ್ಲೆಗಳಲ್ಲಿಯೂ ಬೆಂಗಳೂರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಿದ್ದಾರೆ. ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಡ್ರಗ್ಸ್ ದಂಧೆಕೋರರ ಸದೆಬಡಿಯಲು ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.‌ ಕೊಡಗು ಜಿಲ್ಲೆಯ ಹೋಂ ಸ್ಟೇ, ರೆಸಾರ್ಟ್‌ಗಳಲ್ಲಿ ಮಾದಕ ದ್ರವ್ಯ ಬಳಸಲಾದ ಪಾರ್ಟಿಗಳು ನಡೆದಿದೆಯೇ ಎಂಬ ಬಗ್ಗೆಯೂ ತನಿಖೆ ಕೈಗೊಳ್ಳಲಾಗುತ್ತಿದೆ ಎಂದರು.

ರಾಜ್ಯ ಪೊಲೀಸ್ ಇಲಾಖೆಯಲ್ಲಿನ 1,500 ಪೊಲೀಸರಿಗೆ ಈವರೆಗೂ ಕೊರೊನಾ ಸೋಂಕು ತಗುಲಿದ್ದು, ಈ ಪೈಕಿ 73 ಮಂದಿ ಸಾವಿಗೀಡಾಗಿದ್ದಾರೆ ಎಂದು ಡಿಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದರು. ಕೊರೊನಾ ಸೋಂಕಿತ ಪೊಲೀಸರಿಗೆ ಮಾನಸಿಕ ಸ್ಥೈರ್ಯ ನೀಡಲು ನಾನು ರಾಜ್ಯವ್ಯಾಪಿ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ತಿಳಿಸಿದರು.

ಅಷ್ಟೇ ಅಲ್ಲದೇ ಕೊಡಗು ಜಿಲ್ಲೆಯಲ್ಲಿ ಪ್ರಾಕೖತಿಕ ವಿಕೋಪ ನಿವ೯ಹಣೆಯಲ್ಲಿ ಪೊಲೀಸರು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಉತ್ತಮ ರೀತಿಯಲ್ಲಿ ಕಾರ್ಯನಿವ೯ಹಿಸಿದ್ದಾರೆ. ಕೊರೊನಾ ನಿಯಂತ್ರಣದಲ್ಲಿಯೂ ಕೊಡಗು ಪೊಲೀಸರ ಕಾರ್ಯನಿರ್ವಹಣೆ ಗಮನಾರ್ಹವಾಗಿದೆ ಅಂತಾ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಶ್ಲಾಘಿಸಿದರು. ಜಿಲ್ಲೆಯ ಪೊಲೀಸರ ವಸತಿ ದುರಸ್ತಿ ಮತ್ತು ವಾಹನ ದುರಸ್ತಿ ಸಂಬಂಧಿತ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ABOUT THE AUTHOR

...view details