ಕೊಡಗು: ದಿನದಿಂದ ದಿನಕ್ಕೆ ವ್ಯಾಪಕವಾಗಿ ಹೆಚ್ಚುತ್ತಿರುವ ಕೊರೊನಾ 2ನೇ ಅಲೆಗೆ ಜಿಲ್ಲೆಯ ಜನ ಅಕ್ಷರಶಃ ತತ್ತರಗೊಂಡಿದ್ದಾರೆ. ಹೀಗಾಗಿ ವೈರಸ್ ಹರಡುವಿಕೆ ತಡೆಯಲು ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ.
ಜಿಲ್ಲಾದ್ಯಂತ ಸರ್ಕಾರ ಜಾರಿಗೊಳಿಸಿರುವ ಕರ್ಫ್ಯೂವನ್ನು ಮತ್ತಷ್ಟು ಕಠಿಣ ಮಾಡಲಾಗಿದೆ. ಅಲ್ಲದೇ, ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಇರಲಿದ್ದು, ಈ ಹಿನ್ನೆಲೆ ಮಧ್ಯಾಹ್ನ 12 ಗಂಟೆಯಿಂದ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.