ಕೊಡಗು:ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾಶಯದಲ್ಲಿ ನಡೆದಿದೆ.
ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು.. - ಕೊಡಗು ಸಾವಿನ ಸುದ್ದಿ
ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾಶಯದಲ್ಲಿ ನಡೆದಿದೆ.
ಹಾರಂಗಿ ಜಲಾಶಯ
ದಾವಣಗೆರೆ ಹೊನ್ನಾಳಿ ಸಾಯಿ ಗುರುಕುಲದ ಪುನೀತ್ (18) ಮೃತ ವಿದ್ಯಾರ್ಥಿಯಾಗಿದ್ದು, ಕಾಲೇಜು ವಿದ್ಯಾರ್ಥಿಗಳ ಜೊತೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ನೀರು ಕಡಿಮೆ ಇದ್ದ ಜಾಗದಲ್ಲಿ ಆಟವಾಡಲು ಹೋದಂತಹ ಸಂದರ್ಭದಲ್ಲಿ ಆಳವಾದ ಗುಂಡಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ನೀರಿನಲ್ಲಿ ಮುಳುಗಿದ್ದ ಶವವನ್ನು ಹೊರ ತೆಗೆದಿದ್ದಾರೆ.
ಈ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.