ಕರ್ನಾಟಕ

karnataka

ETV Bharat / state

ಸಂಡೇ ಲಾಕ್‌ಡೌನ್‌: ಕೊಡಗಿನಲ್ಲಿ ಉತ್ತಮ ಪ್ರತಿಕ್ರಿಯೆ..! - Good response at Kodagu

ರಾಜ್ಯಾದ್ಯಂತ ಕೊರೊನಾ ಮಹಾಮಾರಿಯ ನಿಯಂತ್ರಣಕ್ಕೆ ಸಂಡೇ ಲಾಕ್​ಡೌನ್​ನ್ನು ಜಾರಿಗೆ ತಂದಿದ್ದು ಈ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Good response at Kodagu!
ಕೊಡಗಿನಲ್ಲಿ ಉತ್ತಮ ಪ್ರತಿಕ್ರಿಯೆ

By

Published : Jul 12, 2020, 5:48 PM IST

ಕೊಡಗು: ಜುಲೈ ತಿಂಗಳ 2ನೇ ವಾರದ ಸಂಡೇ ಲಾಕ್‍ಡೌನ್‍ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಎಲ್ಲವೂ ಸ್ತಬ್ಧವಾಗಿದೆ.

ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದ್ದು, ನಗರದಲ್ಲಿ ಅಗತ್ಯ ವಸ್ತುಗಳ ಸೇವೆಗಳನ್ನು ಹೊರತುಪಡಿಸಿದರೆ ಎಲ್ಲವೂ ಸ್ತಬ್ಧವಾಗಿದ್ದವು.

ಸಂಡೇ ಲಾಕ್‌ಡೌನ್‌

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಚೆಕ್‌‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಜಿಲ್ಲೆ ಪ್ರವಾಸಿ ತಾಣ ಆಗಿರುವುದರಿಂದ ಹೊರ ಜಿಲ್ಲೆಯ ಜನರು ಆಗಮಿಸಿದರೆ ಮತ್ತಷ್ಟು ಸಮಸ್ಯೆಗಳು ಎದುರಾಗಬಹುದು. ಹೆಚ್ಚುತ್ತಿರುವ ಪಾಸಿಟಿವ್ ಪ್ರಕರಣಗಳಿಂದ ಹೊರಗೆ ಹೋಗಲು ಭಯವಾಗುತ್ತಿದೆ. ಕೊರೊನಾ ದೇಶದಾದ್ಯಂತ ಕಾಡ್ಗಿಚ್ಚಿನಂತೆ ವ್ಯಾಪಿಸುತ್ತಿದೆ. ಬೆಂಗಳೂರಿನ ಮಾದರಿಯಂತೆ ಜಿಲ್ಲೆಯಲ್ಲೂ ಕನಿಷ್ಠ 14 ದಿನಗಳು ಲಾಕ್‍ಡೌನ್ ಘೋಷಿಸಬೇಕು. ಚೆಕ್‍ಪೋಸ್ಟ್‌ಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ABOUT THE AUTHOR

...view details