ಕರ್ನಾಟಕ

karnataka

ETV Bharat / state

ಸಂಜೆಯಾದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಳಿಸಿದ ಎನ್​ಡಿಆರ್​ಎಫ್​ ತಂಡ - Talakauveri Brahmagiri hill collapse update

ರಾತ್ರಿಯಾದ ಹಿನ್ನೆಲೆಯಲ್ಲಿ ಬ್ರಹ್ಮಗಿರಿ ಬೆಟ್ಟದ ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯ ಸ್ಥಳಗೊಳಿಸಲಾಗಿದೆ. ನಾಳೆ ಮತ್ತೆ ರಕ್ಷಣಾ ಕಾರ್ಯ ಮುಂದುವರಿಯಲಿದೆ.

ಕಾರ್ಯಾಚರಣೆ ಸ್ಥಗಿತಗೊಳಿಸಿದ ಎನ್​ಡಿಆರ್​ಎಫ್​ ತಂಡ
ಕಾರ್ಯಾಚರಣೆ ಸ್ಥಗಿತಗೊಳಿಸಿದ ಎನ್​ಡಿಆರ್​ಎಫ್​ ತಂಡ

By

Published : Aug 8, 2020, 8:25 PM IST

ತಲಕಾವೇರಿ (ಕೊಡಗು): ಜಿಲ್ಲೆಯ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿದ್ದವರ ಹುಡುಕಾಟದಲ್ಲಿ ತೊಡಗಿದ್ದ ಎನ್‌ಡಿಆರ್‌ಎಫ್ ಸಿಬ್ಬಂದಿ, ಸಂಜೆಯಾದ ಕಾರಣ ರಕ್ಷಣಾ ಕಾರ್ಯಚರಣೆಯನ್ನು ಸ್ಥಗಿತಗೊಳಿಸಿದೆ.

ಬ್ರಹ್ಮಗಿರಿ ಬೆಟ್ಟದಲ್ಲಿ ಎನ್‌ಡಿಆರ್‌ಎಫ್ ತಂಡದ ಕಾರ್ಯಾಚರಣೆ

ಮೂರು ದಿನಗಳ ಬಳಿಕ ಕಾರ್ಯಾಚರಣೆ ಆರಂಭಿಸಿದ್ದ ಎನ್‌ಡಿಆರ್‌ಎಫ್ ತಂಡ, ಇಂದು ಮಧ್ಯಾಹ್ನ ಕಣ್ಮರೆಯಾದವರಿಗೆ ತೀವ್ರ ಶೋಧ ನಡೆಸಿದ್ದರು. ಮೊದಲ ದಿನದ ಕಾರ್ಯಾಚರಣೆಯಲ್ಲಿ ಕಾಣೆಯಾಗಿದ್ದ ಐವರಲ್ಲಿ ಆನಂದ ತೀರ್ಥ ಸ್ವಾಮೀಜಿ ಮೃತ ದೇಹ ಪತ್ತೆಯಾಗಿತ್ತು.‌

ಆನಂದ ತೀರ್ಥ ಸ್ವಾಮೀಜಿ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಮಡಿಕೇರಿ ತಾಲೂಕಿನ ತಾವೂರಿ‌ನ ಸಮೀಪ ಚೆದುಕಾರ್ ಸೇತುವೆ ಬಳಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮೃತ ದೇಹವನ್ನು ವೀಕ್ಷಿಸಿದರು.

ಜಿಲ್ಲೆಯಲ್ಲಿ ಮಳೆ ಕಡಿಮೆ ಆಗಿರುವುದರಿಂದ ನಾಳೆ ಎನ್‌ಡಿ‌ಆರ್‌ಎಫ್ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಲಿದ್ದಾರೆ.

ABOUT THE AUTHOR

...view details