ಕರ್ನಾಟಕ

karnataka

ETV Bharat / state

ತಲಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕೊರೊನಾ ನಡುವೆ ಸಕಲ ತಯಾರಿ

ಈ ಬಾರಿ ಕಾವೇರಿ ತೀರ್ಥೋದ್ಭವ ವೀಕ್ಷಿಸಲು ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ. ಆದ್ರೆ, ಕೋವಿಡ್‌ ಮುನ್ನೆಚ್ಚರಿಕೆ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಭಕ್ತರು ಕಾವೇರಿ ದರ್ಶನ ಮಾಡಬೇಕು ಎಂದು ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.

ತಲಕಾವೇರಿ ತೀರ್ಥೋದ್ಭವ
ತಲಕಾವೇರಿ ತೀರ್ಥೋದ್ಭವ

By

Published : Oct 8, 2021, 7:42 AM IST

Updated : Oct 8, 2021, 1:24 PM IST

ಕೊಡಗು: ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಆರಂಭವಾಗಿದೆ. ತಲಕಾವೇರಿಯಲ್ಲಿ ಇದೇ ಅಕ್ಟೋಬರ್ 17ರಂದು ಭಾನುವಾರ ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿಯು ತೀರ್ಥರೂಪಿಯಾಗಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ.

ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ತಲಕಾವೇರಿಯಲ್ಲಿ ತೀರ್ಥೋದ್ಭವವನ್ನು ಈ‌ ಬಾರಿ ಸರಳ ರೀತಿಯಲ್ಲಿ ಆಚರಿಸಲು ಸಿದ್ಧತೆ ನಡೆಯುತ್ತಿದೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದರು. ಆದರೆ ಕೊರಾನಾ ಕಾರಣ ಈ ಬಾರಿ ಕಾವೇರಿಯ ಕುಡಿಕೆ ಬಳಿ ಸ್ನಾನಕ್ಕೆ ಅವಕಾಶ ಇರುವುದಿಲ್ಲ. ಕಡಿಮೆ ಭಕ್ತರು ತೀರ್ಥೋದ್ಭವ ಸಂದರ್ಭದಲ್ಲಿ ಭಾಗವಹಿಸಬೇಕು. ಹಾಗೂ ಕೋವಿಡ್​ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ದೇವಾಲಯದ ಆಡಳಿತ ಮಂಡಳಿ ಸೂಚನೆ ಕೊಟ್ಟಿದೆ.

ತಲಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ

ಕಾವೇರಿ ತೀರ್ಥೋದ್ಭವಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ನಂತರ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, 'ಈ ಬಾರಿ ಕಾವೇರಿ ತೀರ್ಥೋದ್ಭವ ವೀಕ್ಷಿಸಲು ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಭಕ್ತರು ಕಾವೇರಿ ದರ್ಶನ ಮಾಡಬೇಕು. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಸ್ನಾನಕ್ಕೆ ಅವಕಾಶ ಇರುತ್ತದೆ. ಆದರೆ ತಲಕಾವೇರಿ ಕುಡಿಕೆ ಬಳಿ ಸ್ನಾನ ಮಾಡಲು ಅವಕಾಶವಿಲ್ಲ. ಜೊತೆಗೆ ಈ ಬಾರಿ ಭಕ್ತರಿಗೆ ಊಟದ ವ್ಯವಸ್ಥೆ ಇರುವುದಿಲ್ಲ. ಕೇವಲ ಸ್ವಯಂಸೇವಕರು ಪೊಲೀಸ್ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗೆ ಮಾತ್ರ ಊಟದ ವ್ಯವಸ್ಥೆಯನ್ನು ಕೊಡಗು ಏಕೀಕರಣ ರಂಗದ ಪ್ರಮುಖರು ಮಾಡಲಿದ್ದಾರೆ‌' ಎಂದು ತಿಳಿಸಿದರು.

Last Updated : Oct 8, 2021, 1:24 PM IST

ABOUT THE AUTHOR

...view details