ಕರ್ನಾಟಕ

karnataka

ETV Bharat / state

ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ : ಕೊರೊನಾ ನಡುವೆ ಸಕಲ ತಯಾರಿ - ಕಾವೇರಿಯ ಪವಿತ್ರ ತೀರ್ಥೋದ್ಭವ

ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ತಲಕಾವೇರಿಯಲ್ಲಿ ತೀರ್ಥೋದ್ಭವವನ್ನು ಈ‌ ಬಾರಿ ಸರಳ ರೀತಿ ಆಚರಿಸಲು ಸಿದ್ಧತೆ ನಡೆಯುತ್ತಿದೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದರು..

ತಲಕಾವೇರಿ
ತಲಕಾವೇರಿ

By

Published : Oct 16, 2021, 8:35 PM IST

ಕೊಡಗು :ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ತಲಕಾವೇರಿಯಲ್ಲಿ ನಾಳೆ ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿಯು ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ.

ತಲಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ..

ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ತಲಕಾವೇರಿಯಲ್ಲಿ ತೀರ್ಥೋದ್ಭವವನ್ನು ಈ‌ ಬಾರಿ ಸರಳ ರೀತಿ ಆಚರಿಸಲು ಸಿದ್ಧತೆ ನಡೆಯುತ್ತಿದೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದರು.

ಆದರೆ, ಕೊರಾನಾ ಕಾರಣ ಈ ಬಾರಿ ಕಾವೇರಿಯ ಕುಡಿಕೆ ಬಳಿ ಸ್ನಾನಕ್ಕೆ ಅವಕಾಶ ಇರುವುದಿಲ್ಲ. ಕಡಿಮೆ ಭಕ್ತರು ತೀರ್ಥೋದ್ಭವ ಸಂದರ್ಭದಲ್ಲಿ ಭಾಗವಹಿಸಬೇಕು. ಹಾಗೂ ಕೋವಿಡ್​ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ದೇವಾಲಯದ ಆಡಳಿತ ಮಂಡಳಿ ಸೂಚಿಸಿದೆ.

ABOUT THE AUTHOR

...view details