ಕೊಡಗು: ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಗಂಡು ಮಗುವೊಂದು ಮೃತಪಟ್ಟಿರುವ ಘಟನೆ ಕೂಡಿಗೆ ಗ್ರಾಮ ಪಂಚಾಯಿತಿಯ ಮಾವಿನಹಳ್ಳ ಗ್ರಾಮದಲ್ಲಿ ನಡೆದಿದೆ.
ಲಾಕ್‌ಡೌನ್ ಎಫೆಕ್ಟ್: ಕೊಡಗಿನಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಮಗು ಸಾವು - ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಮಗು ಸಾವು ನ್ಯೂಸ್
ಲಾಕ್‌ಡೌನ್ ಹಿನ್ನೆಲೆ ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯಿತಿಯ ಮಾವಿನಹಳ್ಳ ಗ್ರಾಮದಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಗಂಡು ಮಗುವೊಂದು ಸಾವನ್ನಪ್ಪಿದ್ದು, ಮಗುವಿನ ಪೋಷಕರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾವಿನಹಳ್ಳ ಗ್ರಾಮದ ಪ್ರತೀಶ್ ಹಾಗೂ ಲೀಲಾ ಎಂಬ ದಂಪತಿಯ ಎರಡೂವರೆ ತಿಂಗಳ ಮಗುವಿಗೆ ಉಸಿರಾಟದ ತೊಂದರೆ ಉಂಟಾಗಿತ್ತು. ಈ ವೇಳೆ ಅವರು ಮಗುವನ್ನು ಕುಶಾಲನಗರ ಸಮೀಪದ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆಂದು ಕರೆದುಕೊಂಡು ಹೊರಟಿದ್ದರು. ಆದ್ರೆ ಕೊರೊನಾ ಪರಿಣಾಮ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಂದೋಬಸ್ತ್‌ಗೆ ಪೊಲೀಸರನ್ನು ನಿಯೋಜಿಸಿದ್ದರಿಂದ ಪೋಲಿಸರ ಭಯದಿಂದ ವಾಹನ ಚಾಲಕರು ಆಸ್ಪತ್ರೆಗೆ ಬರಲು ಒಪ್ಪಲಿಲ್ಲ.
ಬಳಿಕ ಗ್ರಾಮದ ಯುವಕನೊಬ್ಬ ಕಾರಿನಲ್ಲಿ ಹೆಬ್ಬಾಲೆಗೆ ಕರೆ ತಂದಿದ್ದಾರೆ. ಹೆಬ್ಬಾಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಪ್ರಥಮ ಚಿಕಿತ್ಸೆ ನೀಡಿ ನಂತರ ಕುಶಾಲನಗರ ಅರೋಗ್ಯ ಕೇಂದ್ರಕ್ಕೆ ಕಳುಹಿಸಿದ್ದರು. ಕುಶಾಲನಗರ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಪರಿಕ್ಷಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕಳುಹಿಸಲಾಗಿತ್ತು. ಆದರೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಮಗು ಅಸುನೀಗಿದ್ದು, ಮಗುವಿನ ಪೋಷಕರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.