ಕೊಡಗು:ಕೊರೊನಾ ಸೋಂಕಿತರನ್ನು ದಾಖಲಿಸಿರುವ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ವ್ಯವಸ್ಥೆಯನ್ನೇ ನೀಡಿಲ್ಲ ಎಂದು ಸೋಂಕಿತ ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ.
ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿಲ್ಲ ಸೂಕ್ತ ವ್ಯವಸ್ಥೆ: ಸೋಂಕಿತನ ಗಂಭೀರ ಆರೋಪ..! - corona madikeri news
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಯೊಬ್ಬರು ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳ ಕುರಿತು ನೋವು ತೋಡಿಕೊಂಡಿದ್ದಾರೆ.
ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿಲ್ಲ ಸೂಕ್ತ ವ್ಯವಸ್ಥೆ
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಯೊಬ್ಬರು ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳ ಕುರಿತು ನೋವು ತೋಡಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ 20 ರೋಗಿಗಳಿಗೆ ಒಂದೇ ಶೌಚಾಲಯ ಇದೆ. ಕುಡಿಯಲು ಬಿಸಿ ನೀರು ಕೂಡ ಒದಗಿಸುತ್ತಿಲ್ಲ, ದಿನಕ್ಕೆ ಎರಡು ಬಾರಿ ಮಾತ್ರ ಬಿಸಿ ನೀರು ಕೊಡುತ್ತಿದ್ದಾರೆ ಎಂದರು.
ಸ್ಯಾನಿಟೈಸರ್ ಕೂಡ ಸರಿಯಾಗಿ ವಿತರಣೆ ಮಾಡತ್ತಿಲ್ಲ ಎಂದು ದೂರಿದರು. ಆಸ್ಪತ್ರೆಯಲ್ಲಿ ಇರುವುದಕ್ಕಿಂತ ಮನೆಯಲ್ಲಿದ್ದರೇ ಚೆನ್ನಾಗಿರುತ್ತಿದ್ದೆವು ಎಂದು ಮಡಿಕೇರಿಯ ಕೋವಿಡ್ ವಾರ್ಡ್‌ನಲ್ಲಿರುವ ಕೊರೊನಾ ಸೋಂಕಿತರೊಬ್ಬರು ಅಸಮಾಧಾನ ಹೊರ ಹಾಕಿದ್ದಾರೆ.