ಕರ್ನಾಟಕ

karnataka

ETV Bharat / state

ಕೋವಿಡ್​​ ಎಫೆಕ್ಟ್​​​: ಕೊಡಗಿಗೆ ಬರುವ ಪ್ರವಾಸಿಗರಿಗೆ ವಸತಿ ಸೌಲಭ್ಯ ನೀಡದಿರಲು ಡಿಸಿ ಆದೇಶ! - kodagu corona news

ಜುಲೈ 7ರಿಂದ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಗೆ ಹೊರ ಜಿಲ್ಲೆ, ಹೊರ ರಾಜ್ಯ ಮತ್ತು ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಜಿಲ್ಲೆಯ ಎಲ್ಲಾ ಹೋಟೆಲ್, ಹೋಂ ‌ಸ್ಟೇ, ರೆಸಾರ್ಟ್, ಲಾಡ್ಜ್, ವಸತಿ ಗೃಹ ಮತ್ತಿತರ ವಸತಿ ಸೌಕರ್ಯ ನೀಡುವಂತಿಲ್ಲ.

kodagu
ಜಿಲ್ಲಾಧಿಕಾರಿ ಆದೇಶ

By

Published : Jul 7, 2020, 4:57 PM IST

ಕೊಡಗು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ತೀವ್ರತೆ ತಡೆಗಟ್ಟುವ ಉದ್ದೇಶದಿಂದ ಎಲ್ಲಾ ಹೋಟೆಲ್, ಹೋಂ ಸ್ಟೇ, ರೆಸಾರ್ಟ್, ಲಾಡ್ಜ್, ವಸತಿ ಗೃಹಗಳು ಹೊರಗಿನಿಂದ ಜಿಲ್ಲೆಗೆ ಬರುವವರಿಗೆ ವಸತಿ ಸೌಕರ್ಯ ನೀಡದಂತೆ ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ಆದೇಶ ಹೊರಡಿಸಿದ್ದಾರೆ.

ಆರ್‌ಪಿಸಿ ಕಾಯ್ದೆ 1973ರ ಸೆಕ್ಷನ್ 144 (3) ಅಡಿ ಹಾಗೂ ಡಿಸಾಸ್ಟರ್ ಮ್ಯಾನೇಜ್​ಮೆಂಟ್ ಆಕ್ಟ್ 2005ರ ಕಲಂ 34(ಸಿ)ರಡಿಯಲ್ಲಿ ಮತ್ತು ಉಲ್ಲೇಖ (2)ರ ಆದೇಶದಂತೆ ತಕ್ಷಣದಿಂದ ಜಾರಿಗೆ ಬರುವಂತೆ ಜುಲೈ 7ರಿಂದ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಗೆ ಹೊರ ಜಿಲ್ಲೆ, ಹೊರ ರಾಜ್ಯ ಮತ್ತು ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಜಿಲ್ಲೆಯ ಎಲ್ಲಾ ಹೋಟೆಲ್, ಹೋಂ ‌ಸ್ಟೇ, ರೆಸಾರ್ಟ್, ಲಾಡ್ಜ್, ವಸತಿ ಗೃಹ ಮತ್ತಿತರ ವಸತಿ ಸೌಕರ್ಯ ನೀಡುವಂತಿಲ್ಲ.

ಇನ್ನು ಮುಂದೆ ಜಿಲ್ಲೆಯ ಹೊರ ಭಾಗದ ಪ್ರವಾಸಿಗರ ಆನ್‍ಲೈನ್, ಆಫ್‍ಲೈನ್ ಮತ್ತಿತರ ಯಾವುದೇ ರೂಪದ ಬುಕ್ಕಿಂಗ್​ ಸ್ವೀಕರಿಸಬಾರದು. ಈಗಾಗಲೇ ಆಗಮಿಸಿ ವಸತಿ ಸೌಕರ್ಯ ಹೊಂದಿರುವ ಪ್ರವಾಸಿಗರನ್ನು ಬಲವಂತವಾಗಿ ಕಳುಹಿಸದೆ, ಅವರು ವಾಸ್ತವ್ಯಕ್ಕೆ ಕಾಯ್ದಿರಿಸಿದ ಅವಧಿ ಪೂರ್ಣಗೊಳ್ಳುವವರೆಗೆ ಕಾಯುವುದು ಮತ್ತು ಅವಧಿಯನ್ನು ವಿಸ್ತರಿಸಬಾರದು.

ಪ್ರವಾಸ ಉದ್ದೇಶಕ್ಕೆ ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿ, ಆಗಮಿಸದಿದ್ದಲ್ಲಿ ಅವರು ಆಗಮಿಸುವ ಮುಂಚಿತವಾಗಿ ಸೂಕ್ತ ಮಾಹಿತಿ ನೀಡಿ ಬುಕ್ಕಿಂಗ್ ರದ್ದುಪಡಿಸಬೇಕು.‌ ತುರ್ತು ವೈದ್ಯಕೀಯ ಹಾಗೂ ಅನಿವಾರ್ಯ ಪರಿಸ್ಥಿತಿಯಲ್ಲಿ ಜಿಲ್ಲೆಗೆ ಆಗಮಿಸುವವರಿಗೆ ನಿರ್ಬಂಧ ಇರುವುದಿಲ್ಲ. ಆದರೆ ಈ ರೀತಿ ಆಗಮಿಸಿದ್ದಲ್ಲಿ ಅವರು ಆಗಮಿಸಿದ ಕಾರಣದ ಪೂರ್ಣ ವಿವರ ಪಡೆದು ವಸತಿ ಸೌಕರ್ಯ ನೀಡುವುದು ಮತ್ತು ಈ ಬಗ್ಗೆ ಸ್ಥಳೀಯ ಕಾರ್ಯ ವ್ಯಾಪ್ತಿಯ ಪೊಲೀಸ್ ಠಾಣೆ, ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯತ್​ಗಳಿಗೆ ಮಾಹಿತಿ ನೀಡಬೇಕು.

ಈ ಆದೇಶ ಉಲ್ಲಂಘನೆ ಮಾಡಿದಲ್ಲಿ ಭಾರತೀಯ ದಂಡ ಸಂಹಿತೆ 1860ರ ಕಲಂ 188ರ ಪ್ರಕಾರ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.‌

ABOUT THE AUTHOR

...view details