ಕೊಡಗು: ವಿರಾಜಪೇಟೆ ತಾಲ್ಲೂಕಿನ ಮಾಕುಟ್ಟ ಚೆಕ್ ಪೋಸ್ಟ್ ಬಳಿ ವಾಹನ ಚಾಲಕರಿಂದ ಹಣ ಪಡೆಯುತ್ತಿದ್ದ ಆರೋಪದಡಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ನೀಡಿದ್ದಾರೆ.
ಚಾಲಕರಿಂದ ಹಣ ವಸೂಲಿ: ಮೂವರು ಪೊಲೀಸ್ ಸಿಂಬ್ಬಂದಿ ಅಮಾನತು
ವಾಹನ ಚಾಲಕರಿಂದ ಹಣ ಪಡೆಯುತ್ತಿದ್ದ ಆರೋಪದಡಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಮೂವರು ಪೊಲೀಸರ ಅಮಾನತು
ಲಾಕ್‌ಡೌನ್ ಆದೇಶದ ಹಿನ್ನಲೆಯಲ್ಲಿ ಮಾಕುಟ್ಟ ಚೆಕ್‌ಪೋಸ್ಟ್ ಬಳಿ ಕರ್ತವ್ಯಕ್ಕೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಗಳಾದ ಸುಬ್ರಮಣಿ, ಜೋಯಪ್ಪ, ಕಾರ್ತಿಕ್ ಅವರು ವಾಹನ ಚಾಲಕರಿಂದ ಹಣ ಪಡೆದುಕೊಳ್ಳುತ್ತಿದ್ದ ಆರೋಪದ ಮೇರೆಗೆ ಮೂವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಡಿ.ಪನ್ನೇಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.