ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಮುಂದುವರೆದ ಹುಲಿ ದಾಳಿ.. ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಜಿಲ್ಲೆಯಲ್ಲಿ ಮತ್ತೆ ಹುಲಿ ದಾಳಿ ಮುಂದುವರೆದಿದೆ. ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ದಾಳಿ ಮಾಡಿ ಕೊಂದಿರುವ ಘಟನೆ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಹೋಬಳಿಯ ಹರಿಹರ ಗ್ರಾಮದಲ್ಲಿ ನಡೆದಿದೆ.

By

Published : Dec 13, 2019, 9:55 PM IST

ಕೊಡಗಿನಲ್ಲಿ ಮುಂದುವರೆದ ಹುಲಿ ದಾಳಿ
Tiger attack in Kodagu

ಕೊಡಗು:ಜಿಲ್ಲೆಯಲ್ಲಿ ಮತ್ತೆ ಹುಲಿ ದಾಳಿ ಮುಂದುವರೆದಿದೆ. ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ದಾಳಿ ಮಾಡಿ ಕೊಂದಿರುವ ಘಟನೆ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಹೋಬಳಿಯ ಹರಿಹರ ಗ್ರಾಮದಲ್ಲಿ ನಡೆದಿದೆ.

ಹರಿಹರ ಗ್ರಾಮದ ಸುರಕ್ಷ ಸುಗಂಧ ಅವರ ಹಸು ಹುಲಿ ದಾಳಿಗೆ ಬಲಿಯಾಗಿದೆ‌.‌ ವಿರಾಜಪೇಟೆ ತಾಲೂಕಿನಲ್ಲಿ ನಿರಂತರವಾಗಿ ಹುಲಿ ದಾಳಿಯ ಸರಣಿ ಪ್ರಕರಣಗಳು ನಡೆಯುತ್ತಿದ್ದು,‌ ಕಳೆದ ಒಂದು ವಾರದಲ್ಲಿ5 ಕ್ಕೂ ಹೆಚ್ಚು ಹಸುಗಳನ್ನು ಬಲಿ ಪಡೆದಿದೆ. ಹುಲಿ ದಾಳಿಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದು, ಹುಲಿ ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ‌.

ABOUT THE AUTHOR

...view details