ಕೊಡಗು:ಜಿಲ್ಲೆಯ ವಿವಿಧ ಕಡೆಗಳಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕುತ್ತಿರುವ ಪ್ರಕರಣಗಳು ದಿನೆದಿನೇ ಹೆಚ್ಚಾಗುತ್ತಿವೆ.
ನಿನ್ನೆ ತಡರಾತ್ರಿ ಕೂಡ ವಿರಾಜಪೇಟೆ ತಾಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದ ನಿವಾಸಿ ನವೀನ್ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿದೆ. ಇದು ಗ್ರಾಮಸ್ಥರ ಆತಂಕ್ಕಕ್ಕೆ ಎಡೆಮಾಡಿಕೊಟ್ಟಿದೆ.
ಅಷ್ಟೇ ಅಲ್ಲದೆ, ಎರಡು ದಿನಗಳ ಹಿಂದಷ್ಟೇ ವಿರಾಜಪೇಟೆ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿತ್ತು. ವಾರಕ್ಕೆ ಎರಡರಿಂದ ಮೂರು ಬಾರಿ ಹಸುಗಳ ಮೇಲೆ ಹುಲಿ ದಾಳಿ ನಡೆಸುತ್ತಿದೆ. ಹೀಗಾಗಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಕೂಲಿ ಕೆಲಸಕ್ಕಿರಲಿ, ಮನೆಯಿಂದ ಹೊರ ಬರಲು ಸಹ ಹೆದರುತ್ತಿದ್ದಾರೆ.
ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.