ಕೊಡಗು: ಜಿಲ್ಲೆಯಲ್ಲಿ ಹುಲಿ ದಾಳಿ ನಿರಂತರವಾಗಿ ಮುಂದುವರಿದಿದ್ದು, ಇದೀಗ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ನಡೆದಿದೆ.
ಹುಲಿ ದಾಳಿಗೆ ಹಸು ಬಲಿ: ಸ್ಥಳೀಯರಲ್ಲಿ ಆತಂಕ - Tiger attacks on cow
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿದೆ.
Tiger attack
ನಾಲ್ಕೇರಿ ಗ್ರಾಮದ ವಿಜಯ್ ಎಂಬುವರಿಗೆ ಸೇರಿದ ಹಸುವನ್ನು ಹುಲಿ ಕೊಂದಿದೆ. ಈ ನರಭಕ್ಷಕ ವ್ಯಾಘ್ರ ಕಳೆದ ಒಂದು ತಿಂಗಳಲ್ಲಿ 9 ಹಸು ಮತ್ತು ಮೂರು ಜನರನ್ನು ಬಲಿ ಪಡೆದಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಮನೆಮಾಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ರೈತರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
ಇನ್ನು ಪೊನ್ನಂಪೇಟೆ ಭಾಗದಲ್ಲಿ ಹುಲಿ ಸೆರೆಗಾಗಿ 150 ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯ ಪ್ರಾರಂಭಿಸಿದ್ದು, ರಾತ್ರಿ ವೇಳೆ ಗಸ್ತು ಪ್ರಾರಂಭಿಸಿದ್ದಾರೆ.