ಕರ್ನಾಟಕ

karnataka

ETV Bharat / state

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಹೆಣ್ಣು ಹುಲಿ ಸಾವು - ನಾಗರಹೊಳೆಯಲ್ಲಿ ಹುಲಿ ಶವ ಪತ್ತೆ

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುವ ಆನೆ ಚೌಕೂರು ವನ್ಯಜೀವಿ ವಲಯದಲ್ಲಿ ಹೆಣ್ಣು ಹುಲಿಯ ಕಳೇಬರ ಪತ್ತೆಯಾಗಿದೆ.

Tiger found dead in Nagarahole
ನಾಗರಹೊಳೆಯಲ್ಲಿ ಹುಲಿ ಶವ ಪತ್ತೆ

By

Published : Mar 11, 2022, 9:16 AM IST

ಮಡಿಕೇರಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುವ ಆನೆ ಚೌಕೂರು ವನ್ಯಜೀವಿ ವಲಯದ ಮತ್ತಿಗೋಡು ಶಾಖೆಯ ಮರಪಾಲ ಬಳಿ ಹೆಣ್ಣು ಹುಲಿಯ ಮೃತದೇಹ ಪತ್ತೆಯಾಗಿದೆ.

ಅರಣ್ಯ ರಕ್ಷಕರು ಮತ್ತು ಸಿಬ್ಬಂದಿ ಗಸ್ತು ತಿರುವಾಗ ಚೇಣಿಹಡ್ಲು ಹಾಡಿಯ ಹಿಂಭಾಗದ ಆನೆ ತಡೆ ಕಂದಕದ ಒಳಗೆ ಹುಲಿ ಸಾವನ್ನಪ್ಪಿರುವುದನ್ನು ಪತ್ತೆ ಹಚ್ಚಿದ್ದಾರೆ. ಸ್ಥಳಕ್ಕೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಹುಣಸೂರು ವನ್ಯಜೀವಿ ಉಪ ವಿಭಾಗದ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಬಳಿಕ ರಾಷ್ಟ್ರೀಯ ಹುಲಿ ಸಂರಕ್ಷಣೆಗೆ ನಿದೇರ್ಶನಗೊಂಡ ಮುಖ್ಯ ವನ್ಯಜೀವಿ ಪರಿಪಾಲಕ ಬೋಸ್ ಮಾದಪ್ಪ, ಸದಸ್ಯ ಶರೀನ್ ಸುಬ್ಬಯ್ಯ ಅವರ ಸಮ್ಮುಖದಲ್ಲಿ ಇಲಾಖಾ ಪಶುವೈದ್ಯಾಧಿಕಾರಿ ರಮೇಶ್ ಹಾಗೂ ಬಾಳೆಲೆ ಪಶುವೈದ್ಯಾಧಿಕಾರಿ ಡಾ. ಭವಿಷ್ಯ ಕುಮಾರ್ ಅವರು ಹುಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದರು.

ಹೆಚ್ಚಿನ ಪರೀಕ್ಷೆಗಾಗಿ ಹುಲಿಯ ಮೃತ ದೇಹದ ಮಾದರಿಗಳನ್ನು ಸಂಗ್ರಹಿಸಿ ಸ್ಥಳದಲ್ಲಿಯೇ ಹುಲಿಯ ಮೃತದೇಹವನ್ನು ಪಂಚಾಯಿತಿದಾರರ ಸಮಕ್ಷಮದಲ್ಲಿ ಸುಡಲಾಯಿತು.

ಇದನ್ನೂ ಓದಿ:ಯುವಕನ ಮರಕ್ಕೆ ಕಟ್ಟಿ ಆತನ ಕಣ್ಣೆದುರೇ ಪ್ರಿಯತಮೆಯನ್ನ ಅತ್ಯಾಚಾರ ಮಾಡಿದ ಕುಡುಕರ ಗ್ಯಾಂಗ್​!

ABOUT THE AUTHOR

...view details