ಕರ್ನಾಟಕ

karnataka

ETV Bharat / state

ಕೊಡಗು: ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ.. ಬೆಚ್ಚಿಬಿದ್ದ ಜನ - Anxiety among natives of kodagu

ಕಾಫಿ ಗಿಡಗಳ ನಡುವೆ ಹುಲಿ ರಾಜಾರೋಷವಾಗಿ ಓಡಾಡುತ್ತಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹುಲಿ ಓಡಾಡುವ ಫೋಟೋವನ್ನು ಅಲ್ಲಿ ಕೆಲಸ ಮಾಡುವ ಕಾರ್ಮಿಕರು ಮೊಬೈಲ್​ನಲ್ಲಿ ಸೆರೆಹಿಡಿದ್ದಾರೆ.

Tiger found in coffee plantation
ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ

By

Published : Jan 27, 2022, 3:07 PM IST

ಕೊಡಗು:ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ಕಾಫಿ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಇದರಿಂದ ಅಲ್ಲಿನ ಜನ ಭಯಭೀತರಾಗಿದ್ದಾರೆ.

ಕಾಫಿಗಿಡಗಳ ನಡುವೆ ಹುಲಿ ರಾಜಾರೋಷವಾಗಿ ಓಡಾಡುತ್ತಿದ್ದು, ಈ ಫೋಟೋವನ್ನು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಮೊಬೈಲ್​ನಲ್ಲಿ ಸೆರೆಹಿಡಿದ್ದಾರೆ ಎಂದು ತಿಳಿದುಬಂದಿದೆ.

ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ

ಎರಡು ದಿನದ ಹಿಂದೆ ತಿತಿಮತಿ ಭಾಗದಲ್ಲಿ ಆನೆ ಕಂದಕದ ಬಳಿ ‌ಹುಲಿ ಕಾಣಿಸಿಕೊಂಡಿತ್ತು, ಈಗ ತೋಟದಲ್ಲಿ ಪ್ರತ್ಯಕ್ಷವಾಗಿದೆ. ಕಾಫಿ, ಮೆಣಸು ಕಟಾವಿನ ವೇಳೆಯಲ್ಲಿ ಹುಲಿ ಕಾಣಿಸಿಕೊಂಡಿದೆ.

ಇದನ್ನೂ ಓದಿ: ಸಾವಿನಲ್ಲೂ ಒಂದಾದ ಗಂಡ ಹೆಂಡತಿ, ಪತ್ನಿ ಸಾವಿನಿಂದ ಮನನೊಂದು ನೇಣಿಗೆ ಶರಣಾದ ಪತಿ

ಪೊನ್ನಪೇಟೆ ಭಾಗದಲ್ಲಿ ಹುಲಿ‌ ಹಸುಗಳ‌ ಮೇಲೆ ದಾಳಿ ಮಾಡಿ ಕೊಲ್ಲುತ್ತಿದೆ. ಹಾಗಾಗಿ ಹುಲಿ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಹುಲಿ ಕಾಣಿಸಿಕೊಂಡಿರುವುದರಿಂದ ಸ್ಥಳೀಯರಲ್ಲಿ ಭಯ ಶುರುವಾಗಿದೆ. ಇದನ್ನು ಸೆರೆಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details