ವಿರಾಜಪೇಟೆ (ಕೊಡಗು) : ವ್ಯಾಪಾರ ವಹಿವಾಟು ನಡೆಸಲು ಬೆಳಿಗ್ಗೆ 6 ರಿಂದ ಮಧ್ಯಾಹ್ನ 12ರವರೆಗೆ ಸಮಯ ನಿಗದಿಗೊಳಿಸಿದ್ದನ್ನು ವಿರಾಜಪೇಟೆಯ ವರ್ತಕರು ವಿರೋಧಿಸಿದ್ದಾರೆ.
ವಿರಾಜಪೇಟೆಯಲ್ಲಿ ವ್ಯಾಪಾರ ವಹಿವಾಟಿಗೆ ಸಮಯ ನಿಗದಿ, ವರ್ತಕರ ವಿರೋಧ - ವಿರಾಜಪೇಟೆಯಲ್ಲಿ ವ್ಯಾಪಾರ ವಹಿವಾಟಿಗೆ ಸಮಯ ನಿಗಧಿ
ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಜೂನ್ 25ರಂದು ಮಡಿಕೇರಿ ಶಾಸಕ ಕೆ.ಜಿ.ಬೋಪಯ್ಯ ಅವರ ಸಮ್ಮುಖದಲ್ಲಿ ಜರುಗಿದ ಸಭೆಯಲ್ಲಿ ಜಿಲ್ಲಾದ್ಯಂತ ವ್ಯಾಪಾರ ವಹಿವಾಟು ನಡೆಸಲು ಸಮಯ ನಿಗದಿಗೊಳಿಸಲಾಗಿದೆ.
ವಿರಾಜಪೇಟೆಯಲ್ಲಿ ವ್ಯಾಪಾರ ವಹಿವಾಟಿಗೆ ಸಮಯ ನಿಗಧಿ: ವರ್ತಕರ ವಿರೋಧ
ಈ ಬಗ್ಗೆ ಪ್ರತಿಕ್ರಿಯಿಸಿರುವ ವರ್ತಕ ಅಯಾಝ್, ಈ ಸಮಯದಲ್ಲಿ ಜನಸಂದಣಿ ಜಾಸ್ತಿಯಾಗುತ್ತದೆ. ಇದರಿಂದ ಕೊರೊನಾ ಹರಡುವಿಕೆಯ ಪ್ರಮಾಣ ಜಾಸ್ತಿಯಾಗುವ ಸಾಧ್ಯತೆಯಿದೆ. ಜೊತೆಗೆ ಕಳೆದ ನಾಲ್ಕು ತಿಂಗಳಿನಲ್ಲಿ ಚೇಂಬರ್ ಆಫ್ ಕಾಮರ್ಸ್ ನಮ್ಮ ಸಮಸ್ಯೆಗಳ ಬಗ್ಗೆ ಚಿಂತೆ ಮಾಡಲಿಲ್ಲ ಎಂದು ದೂರಿದರು.