ಮಡಿಕೇರಿ(ಕೊಡಗು):ಆದಿವಾಸಿ ಗಿರಿಜನರಲ್ಲಿ ಪ್ರತಿಭೆಗೆ ಕೊರತೆ ಇಲ್ಲ. ಆದಿವಾಸಿ ಜನರು ತಮ್ಮದೇ ಆದ ಆಚಾರ-ವಿಚಾರ, ಕಲೆ, ಸಂಸ್ಕಂತಿಯನ್ನು ಹೊಂದಿದ್ದಾರೆ. ಇಂತಹ ಪ್ರಾಚೀನ ಕಲೆ, ಸಂಸ್ಕೃತಿ ಪ್ರಪಂಚಕ್ಕೆ ಪಸರಿಸುವಂತಾಗಬೇಕು. ಆ ನಿಟ್ಟಿನಲ್ಲಿ ಆದಿವಾಸಿ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಮೆಚ್ಚುವಂತದ್ದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಜಿ ಬೋಪಯ್ಯ ಹೇಳಿದ್ದಾರೆ.
ಆದಿವಾಸಿ ಗಿರಿಜನರ ಕಲೆ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬಾಳಗೋಡಿವಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಗಿರಿಜನ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕರಾದ ಕೆ.ಜಿ. ಬೋಪಯ್ಯ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದರು.