ತಲಕಾವೇರಿ (ಕೊಡಗು): ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತದ ಬಳಿಕ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಎರಡು ದಿನದಲ್ಲಿ ಮುಗಿಯಬೇಕೆಂದು ಕಂದಾಯ ಸಚಿವ ಆರ್. ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಎನ್‌ಡಿಆರ್‌ಎಫ್ ತಂಡದ ಜೊತೆಗೆ ಎಸ್‌ಡಿಆರ್‌ಎಫ್ ತಂಡಗಳನ್ನು ಬಳಸಿಕೊಂಡು ರಕ್ಷಣಾ ಕಾರ್ಯಚರಣೆ ತೀವ್ರಗೊಳಿಸಬೇಕು. ಆ ಮೂಲಕ ಎರಡೇ ದಿನದಲ್ಲಿ ಕಾರ್ಯಾಚರಣೆ ಮುಗಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅಧಿಕಾರಿಗಳ ಜೊತೆ ಸಚಿವರ ಚರ್ಚೆ ಸ್ಥಳದಲ್ಲಿ ಈಗಾಗಲೇ 20 ಜನರ ಎನ್‌ಡಿಆರ್‌ಎಫ್ ತಂಡ ಮತ್ತು 20 ಜನರ ಎಸ್‌ಡಿಆರ್‌ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವುದು ತಡವಾಗಬಹುದು. ಇದರಿಂದ ಬೇರೆ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ಇರುವ ಎಲ್ಲಾ ಫೋರ್ಸ್ಗಳನ್ನು ಬಳಸಿಕೊಂಡು ಕಾರ್ಯಾಚರಣೆಯನ್ನು ಆದಷ್ಟು ಬೇಗ ಮುಗಿಸುವಂತೆ ಸೂಚಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಾರ್ಯಾಚರಣೆ ತೀವ್ರಗೊಳಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಲು ಸಿದ್ಧ. ಕಾರ್ಯಾಚರಣೆಯನ್ನು ಬೇಗ ಮುಗಿಸಿ ಎಂದು ಹೇಳಿದ್ದಾರೆ. ಈ ವೇಳೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಹಾಗೂ ಸಂಸದ ಪ್ರತಾಪ್ ಸಿಂಹ ಸ್ಥಳಕ್ಕೆ ಭೇಟಿ ನೀಡಿದ್ದರು.