ಕೊಡಗು:ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎರಡು ದಿನಗಳು ಆರೇಂಜ್ ಅಲರ್ಟ್ ಘೋಷಿಸಿದೆ.
ಕೊಡಗಿನಲ್ಲಿ ಎರಡು ದಿನಗಳು ಆರೇಂಜ್ ಅಲರ್ಟ್ ಘೋಷಣೆ ಮಾಡಿದ ಕೇಂದ್ರ ಹವಾಮಾನ ಇಲಾಖೆ - ಭಾರತೀಯ ಹವಾಮಾನ ಇಲಾಖೆ
ಕೊಡಗಿನಲ್ಲಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎರಡು ದಿನಗಳು ಆರೇಂಜ್ ಅಲರ್ಟ್ ಘೋಷಿಸಿದೆ.
ಕೊಡಗಿನಲ್ಲಿ ಮಳೆ
ಜಿಲ್ಲೆಯಲ್ಲಿ ಇಂದು ಮತ್ತು ನಾಳೆ 115.6 ಮಿ.ಮೀ ಹಾಗೂ 204.4 ಮಿ.ಮೀ ಮಳೆ ಬೀಳಲಿದೆ ಎಂಬ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ಆಧರಿಸಿ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಆರೇಂಜ್ ಅಲರ್ಟ್ ಘೋಷಿಸಿದ್ದಾರೆ. ಅಲ್ಲದೇ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರದಿಂದ ಇರಬೇಕು. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಏನಾದರೂ ಸಮಸ್ಯೆಗಳು ಎದುರಾದರೆ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಡಳಿತ ಮನವಿ ಮಾಡಿದೆ.