ಮಡಿಕೇರಿ (ಕೊಡಗು): ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆಯ ಪ್ರಕರಣ ಬೆಳಕಿಗೆ ಬಂದಿರುವ ಮರು ದಿನವೇ ಕೊಡಗಿನಲ್ಲೂ ಡ್ರಗ್ಸ್ ಜಾಲವೊಂದನ್ನು ಡಿಸಿಐಬಿ ಹಾಗೂ ಕುಶಾಲನಗರ ಪೊಲೀಸರು ಭೇದಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ತಿಳಿಸಿದ್ದಾರೆ.
ಕೊಡಗಿನಲ್ಲೂ ಡ್ರಗ್ಸ್ ನಶೆ ಜಾಲ: ಇಬ್ಬರ ಬಂಧನ, ಮೂವರು ಪರಾರಿ - Bangalore Drugs Network
ಬೆಂಗಳೂರಿನ ಡ್ರಗ್ಸ್ ಜಾಲ ಪ್ರಕರಣ ಹೊರ ಬರುತ್ತಿದ್ದಂತೆ ಮಡಿಕೇರಿಯಲ್ಲೂ ಡ್ರಗ್ಸ್ ಜಾಲ ಪತ್ತೆಯಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಇನ್ನೂ ಮೂವರು ಪರಾರಿಯಾಗಿದ್ದಾರೆ.
![ಕೊಡಗಿನಲ್ಲೂ ಡ್ರಗ್ಸ್ ನಶೆ ಜಾಲ: ಇಬ್ಬರ ಬಂಧನ, ಮೂವರು ಪರಾರಿ Two held for drug alligation and Three escaped in Madikeri](https://etvbharatimages.akamaized.net/etvbharat/prod-images/768-512-8600208-435-8600208-1598677995426.jpg)
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರಾ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಗಳಿಂದ ಎರಡು ಕಾರು ಹಾಗೂ ಅಲ್ಪ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈಗಾಗಲೇ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಒಬ್ಬ ವಿದೇಶಿ ಪ್ರಜೆಯೂ ಸೇರಿದಂತೆ ಮೂವರು ಪರಾರಿಯಾಗಿದ್ದಾರೆ. ಕುಶಾಲನಗರ ಹಾಗೂ ಗುಡ್ಡೆಹೊಸೂರಿನಲ್ಲಿ ಕಾರು ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆಯ ದಂಧೆಯು ಇನ್ನಷ್ಟು ವ್ಯಾಪಿಸಿದ್ದು, ಪೊಲೀಸ್ ಇಲಾಖೆ ತನಿಖೆ ಚುರುಕಾಗಿಸಿದೆ ಎಂದು ತಿಳಿಸಿದ್ದಾರೆ.