ಮಡಿಕೇರಿ/ಕೊಡಗು: ಭಾರತೀಯ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ತನ್ನದೇ ಆದ ಮಹತ್ವವಿದೆ. ಮಂಜಿನ ನಗರಿ ಮಡಿಕೇರಿಯಲ್ಲಿ ಯುಗಾದಿ ಸಂಭ್ರಮ ಮನೆಮಾಡಿತ್ತು. ಜಿಲ್ಲೆಯಲ್ಲಿರುವ ದೇವಾಲಯಗಳಲ್ಲಿ ನಿನ್ನೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತರು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುವ ಜೊತೆಗೆ ಬೇವು-ಬೆಲ್ಲದ ಸವಿದು ಸಂತಸ ವ್ಯಕ್ತಪಡಿಸಿದರು.
ಯುಗಾದಿ ಹಬ್ಬದ ಹಿನ್ನೆಲೆ ಮಡಿಕೇರಿಯ ಪ್ರಸಿದ್ಧ ದೇವಾಲಯಗಳದ ಓಂಕಾರೇಶ್ವರ, ಆಂಜನೇಯ , ವಿಜಯ ವಿನಾಯಕ ದೇವಸ್ಥಾನ ಸೇರಿದಂತೆ ವಿವಿಧ ದೇಗುಲಗಳಲ್ಲಿ ಬೆಳಗ್ಗೆಯಿಂದಲೂ ಅನೇಕ ಬಗೆಯ ಪೂಜೆ, ಹೋಮ-ಹವನಗಳನ್ನು ನಡೆಸಲಾಯಿತು. ಮುಂಜಾನೆಯಿಂದಲೇ ಭಕ್ತರು ದೇವಸ್ಥಾನಗಳಿಗೆ ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.