ಬೆಂಗಳೂರು: ಮಡಿಕೇರಿ ನಗರದ ಸ್ಟೋನ್ ಹಿಲ್ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ನಗರಸಭೆ ಸೂಕ್ತ ಬದಲಿ ಜಾಗ ಗುರುತಿಸಲು ವಿಳಂಬ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ಮುಂದಿನ ಎರಡು ವಾರಗಳಲ್ಲಿ ಸೂಕ್ತ ಜಾಗ ಗುರುತಿಸಿ ವರದಿ ನೀಡುವಂತೆ ಆಯುಕ್ತರಿಗೆ ನಿರ್ದೇಶಿಸಿದೆ.
ಮಡಿಕೇರಿಯಲ್ಲಿ ಅವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಪ್ರಕರಣ: ಬದಲಿ ಜಾಗ ಗುರುತಿಸಲು ನಗರಸಭೆಗೆ ಹೈಕೋರ್ಟ್ ಸೂಚನೆ - ಮಡಿಕೇರಿ ನಗರದ ಸ್ಟೋನ್ ಹಿಲ್ ಪ್ರದೇಶ
ಸ್ಟೋನ್ ಹಿಲ್ ಪ್ರದೇಶದಲ್ಲಿ ಅಕ್ರಮವಾಗಿ ಹಾಗೂ ಅವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ನಗರಸಭೆ ಕ್ರಮ ಪ್ರಶ್ನಿಸಿ ಎಸ್ಆರ್ವಿಕೆ ವೆಲ್ಫೇರ್ ಅಸೋಸಿಯೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಪೀಠ, ಸ್ಟೋನ್ ಹಿಲ್ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿ ಮಾಡದಂತೆ ಹಾಗೂ ತ್ಯಾಜ್ಯ ವಿಲೇವಾರಿಗೆ ಸೂಕ್ತ ಪ್ರದೇಶ ಗುರುತಿಸುವಂತೆ ಈಗಾಗಲೇ ಹಲವು ಬಾರಿ ಸೂಚಿಸಲಾಗಿದೆ. ಹಾಗಿದ್ದೂ ನಗರಸಭೆ ಕಾರಣಗಳನ್ನೇ ಕೊಡುತ್ತಾ ಬಂದಿದೆ. ಆದ್ದರಿಂದ ಮುಂದಿನ ಎರಡು ವಾರಗಳಲ್ಲಿ ನಗರಸಭೆ ಸೂಕ್ತ ಜಾಗ ಗುರುತಿಸಿ ವರದಿ ನೀಡಬೇಕು. ಅರ್ಜಿದಾರರು ಜಾಗ ಗುರುತಿಸಲು ನೆರವು ನೀಡಬಹುದು ಎಂದು ಸೂಚಿಸಿ ವಿಚಾರಣೆಯನ್ನು ನವೆಂಬರ್ 25ಕ್ಕೆ ಮುಂದೂಡಿತು.