ಕೊಡಗು: ಅಪರಿಚಿತ ವ್ಯಕ್ತಿಯೊಬ್ಬ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ತಾಲೂಕಿನ ಬೇತ್ರಿ ಗ್ರಾಮದ ಬಳಿ ನಡೆದಿದೆ.
ಕಾವೇರಿ ನದಿಗೆ ಹಾರಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ - ಕೊಡಗು ಜಿಲ್ಲಾ ಸುದ್ದಿ
ಕಾವೇರಿ ನದಿಗೆ ಹಾರಿ ಅಪರಿಚಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೇತ್ರಿ ಗ್ರಾಮದ ಬಳಿ ಜರುಗಿದೆ.
ಕಾವೇರಿ ನದಿಗೆ ಹಾಕಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ
ಅಂದಾಜು (65) ವರ್ಷ ಪ್ರಾಯದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವನ್ನು ಕೊಂಡಂಗೇರಿ ಗ್ರಾಮದ ಸ್ಥಳೀಯ ಯುವಕರು ತೆಪ್ಪದ ಸಹಾಯದಿಂದ ಮೇಲೆತ್ತಿದ್ದಾರೆ.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.