ಕೊಡಗು :ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಿದ್ದ ಪ್ರಾಂಶುಪಾಲರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಪ್ರಾಂಶುಪಾಲರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿನ್ನೆ ಕೋರ್ಟ್ ಆದೇಶವನ್ನು ಮೀರಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಆಗ ಪ್ರಾಂಶುಪಾಲರಾದ ವಿಜಯ್ ಅವರು, ವಿದ್ಯಾರ್ಥಿನಿಯರಿಗೆ ಬುದ್ಧಿವಾದ ಹೇಳಿದ್ದರು. ಆದರೂ ವಿದ್ಯಾರ್ಥಿಗಳು ಹಠಕ್ಕೆ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ವಾಪಸ್ ಕಳುಹಿಸಿದ್ದರು.