ಕೊಡಗು: ಅಪ್ರಾಪ್ತ ವಿದ್ಯಾರ್ಥಿನಿ ನಾಪತ್ತೆ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಸಿದ್ದಾಪುರ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಕಾಲೇಜಿಗೆ ಹೋಗಿದ್ದ ಅಪ್ರಾಪ್ತೆ ನಾಪತ್ತೆ: ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಆಕ್ರೋಶ - ಕಾಲೇಜಿಗೆ ಹೋಗಿದ್ದ ಅಪ್ರಾಪ್ತೆ ನಾಪತ್ತೆ
ಅಪ್ರಾಪ್ತೆ ನಾಪತ್ತೆ ಬಗ್ಗೆ ದೂರು ನೀಡಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನಗೊಂಡ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
![ಕಾಲೇಜಿಗೆ ಹೋಗಿದ್ದ ಅಪ್ರಾಪ್ತೆ ನಾಪತ್ತೆ: ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಆಕ್ರೋಶ a young girl Missing in Madikeri,ಕಾಲೇಜಿಗೆ ಹೋಗಿದ್ದ ಅಪ್ರಾಪ್ತೆ ನಾಪತ್ತೆ](https://etvbharatimages.akamaized.net/etvbharat/prod-images/768-512-5877944-thumbnail-3x2-brm.jpg)
ಕಾಲೇಜಿಗೆ ಹೋಗಿದ್ದ ಅಪ್ರಾಪ್ತೆ ನಾಪತ್ತೆ
ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಆಕ್ರೋಶ
ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅದೇ ಗ್ರಾಮದ ಯುವಕನೊಬ್ಬನ ಮೇಲೆ ಅಪಹರಣ ಪ್ರಕರಣ ದಾಖಲಿಸಿದ್ದಾರೆ.
ಸೋಮವಾರ ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ಮನೆಗೆ ವಾಪಸಾಗದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ದೂರು ನೀಡಿದ್ದರು. ಸೋಮವಾರ ರಾತ್ರಿಯೇ ದೂರು ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.