ಕರ್ನಾಟಕ

karnataka

By

Published : Dec 29, 2020, 4:57 PM IST

ETV Bharat / state

ಭಗಂಡೇಶ್ವರ ದೇವಾಲಯ ಜಾಗದಲ್ಲಿ ತ್ಯಾಜ್ಯ ನೀರು ನಿರ್ವಹಣಾ ಘಟಕದ ಕಾಮಗಾರಿಗೆ ಹಲವರ ವಿರೋಧ

ಮಳೆಗಾಲದ ಸಂದರ್ಭದಲ್ಲಿ ಭಾಗಮಂಡಲದಲ್ಲಿ ಪ್ರತೀ ವರ್ಷ ಪ್ರವಾಹ ಉಂಟಾಗುತ್ತದೆ. ಈ ಸಂದರ್ಭದಲ್ಲಿ ತ್ಯಾಜ್ಯ ನೀರು ಹಾಗೂ ಶೌಚಾಲಯದ ನೀರು ಕಾವೇರಿ ಒಡಲು ಸೇರಿಕೊಳ್ಳುತ್ತದೆ. ಈ ಹಿನ್ನೆಲೆ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಲು ಹಲವರು ಈ ಹಿಂದೆಯೇ ಒತ್ತಾಯಿಸಿದ್ದರು. ಅದರಂತೆ ಇದೀಗ ದೇವಾಲಯದ ಜಾಗದಲ್ಲಿ ಕಾಮಗಾರಿ ಆರಂಭವಾಗಿದೆ. ಆದರೆ ದೇವಾಲಯಕ್ಕೆ ಸಂಬಂಧಿಸಿದ ಕೆಲಸಕ್ಕೆ ಮಾತ್ರ ದೇವಾಲಯದ ಜಾಗವನ್ನು ಉಪಯೋಗಿಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

Waste Water Management
ತ್ಯಾಜ್ಯ ನೀರು ನಿರ್ವಹಣಾ ಘಟಕ

ಭಾಗಮಂಡಲ (ಕೊಡಗು):ಭಾಗಮಂಡಲದಲ್ಲಿ ಶ್ರೀ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯದ ಜಾಗದಲ್ಲಿ ಗ್ರಾಮೀಣ ಕುಡಿಯವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ 1.4 ಕೋಟಿ ರೂ. ವೆಚ್ಚದಲ್ಲಿ ತ್ಯಾಜ್ಯ ನೀರು ನಿರ್ವಹಣಾ ಘಟಕದ ಕಾಮಗಾರಿ ಆರಂಭಗೊಂಡಿದ್ದು, ದೇವಾಲಯ ಜಾಗದಲ್ಲಿ ಈ ಘಟಕ ಸ್ಥಾಪನೆ ಮಾಡುತ್ತಿರುವುದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಮಳೆಗಾಲದ ಸಂದರ್ಭದಲ್ಲಿ ಭಾಗಮಂಡಲದಲ್ಲಿ ಪ್ರತೀ ವರ್ಷ ಪ್ರವಾಹ ಉಂಟಾಗುತ್ತದೆ. ಈ ಸಂದರ್ಭದಲ್ಲಿ ತ್ಯಾಜ್ಯ ನೀರು ಹಾಗೂ ಶೌಚಾಲಯದ ನೀರು ಕಾವೇರಿ ಒಡಲು ಸೇರಿಕೊಳ್ಳುತ್ತದೆ. ಈ ಹಿನ್ನೆಲೆ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಲು ಹಲವರು ಈ ಹಿಂದೆಯೇ ಒತ್ತಾಯಿಸಿದ್ದರು. ಅದರಂತೆ ಇದೀಗ ದೇವಾಲಯದ ಜಾಗದಲ್ಲಿ ಕಾಮಗಾರಿ ಆರಂಭವಾಗಿದೆ.

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಸ್ಥಾನದ ಸರ್ವೆ ನಂ. 94/6ರ 13.20 ಎಕರೆ ಜಾಗವಿದ್ದು, 20 ಸೆಂಟ್​​ ಜಾಗದಲ್ಲಿ ಈ ಘಟಕ ಬರಲಿದೆ. ದೇವಾಲಯದ ಜಾಗದಲ್ಲಿ ಇಂತಹ ಯೋಜನೆ ಬರಬಾರದು. ದೇವಾಲಯಕ್ಕೆ ಸಂಬಂಧಿಸಿದ ಕೆಲಸಕ್ಕೆ ಮಾತ್ರ ದೇವಾಲಯದ ಜಾಗವನ್ನು ಉಪಯೋಗಿಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

ತ್ಯಾಜ್ಯ ನೀರು ನಿರ್ವಹಣಾ ಘಟಕದ ಕಾಮಗಾರಿಗೆ ಹಲವರ ವಿರೋಧ

ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಸದ್ಯಕ್ಕೆ ಪಾರ್ಕಿಂಗ್ ವ್ಯವಸ್ಥೆಯಿದೆ. ಇಲ್ಲಿ ಪ್ರವಾಸಿಗರು ಅಡುಗೆ, ತ್ಯಾಜ್ಯವನ್ನು ಎಸೆಯುತ್ತಿರುವುದು ಸಾಮಾನ್ಯವಾಗಿದೆ. ಈ ಕಾರಣದಿಂದಲೂ ಸಂಗಮ ಕಲುಷಿತವಾಗುತ್ತಿದೆ. ಆದ್ದರಿಂದ ದೇವಾಲಯದ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕಿತ್ತು. ತ್ಯಾಜ್ಯ ನೀರು ನಿರ್ವಹಣಾ ಘಟಕಕ್ಕೆ ಬೇರೆ ಜಾಗ ಹುಡುಕಿ ಅಲ್ಲಿ ಮಾಡುವುದು ಸೂಕ್ತ ಎಂದು ಭಾಗಮಂಡಲ-ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ ಆಗ್ರಹಿಸಿದ್ದಾರೆ.

ನೀರು ಕಲುಷಿತ ತಡೆಯಲು ಯೋಜನೆ
ದೇವಾಲಯದ ಅಂದಾಜು 20 ಸೆಂಟ್​​ ಜಾಗದಲ್ಲಿ ಲಿಕ್ವಿಡ್ ವೇಸ್ಟ್ ಮ್ಯಾನೇಜ್‌ಮೆಂಟ್ ಘಟಕ ನಿರ್ಮಾಣವಾಗಲಿದೆ. ತ್ಯಾಜ್ಯ ನೀರನ್ನು ಈ ಘಟಕದಲ್ಲಿ ಸಂಸ್ಕರಣೆ ಮಾಡಲಾಗುತ್ತದೆ. ಈಗಾಗಲೇ ಘಟಕ ಆರಂಭಿಸಲು ಭಾಗಮಂಡಲದ ದೇವಾಲಯದ ಜಾಗವನ್ನು ಸಮತಟ್ಟು ಮಾಡಲಾಗಿದೆ. ಘಟಕ ಮೂರು ತಿಂಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ.

ABOUT THE AUTHOR

...view details