ಕೊಡಗು: ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪಗಳಲ್ಲಿ ವಾಯುಭಾರ ಕುಸಿತ ಜಿಲ್ಲೆಯ ಮೇಲೂ ಪರಿಣಾಮ ಬೀರಿದ್ದು, ಭಾರೀ ಮಳೆಯ ಮುನ್ಸೂಚನೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಭಾರಿ ಮಳೆ ಮುನ್ಸೂಚನೆ: ಕೊಡಗಿನಲ್ಲಿ ಆರೆಂಜ್ ಅಲರ್ಟ್ - Rain in Kodagu
ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪಗಳಲ್ಲಿ ವಾಯುಭಾರ ಕುಸಿತ ಜಿಲ್ಲೆಯ ಮೇಲೂ ಪರಿಣಾಮ ಬೀರಿದ್ದು, ಭಾರೀ ಮಳೆಯ ಮುನ್ಸೂಚನೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗಿಗೆ ಆರೆಂಜ್ ಅಲರ್ಟ್ ಘೋಷಣೆ
ಅಕ್ಟೋಬರ್ 20ರಿಂದ 24ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಿಲ್ಲೆಯಾದ್ಯಂತ 204 ಮಿಲಿ ಮೀಟರ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಪ್ರವಾಹ ಉಂಟಾಗಿ ಅಪಾರ ಪ್ರಮಾಣದ ಆಸ್ತಿ ಹಾಗೂ ಜೀವ ಹಾನಿಯಾಗಿತ್ತು. ಪ್ರವಾಸಿಗರು ಹಾಗೂ ಸ್ಥಳೀಯರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.