ಕರ್ನಾಟಕ

karnataka

ETV Bharat / state

ಒಳನಾಡು ಪ್ರದೇಶಗಳಲ್ಲಿ ಮಳೆ: ಕೊಡಗಿನಲ್ಲಿ ಯೆಲ್ಲೋ , ಆರೆಂಜ್ ಅಲರ್ಟ್ - orange alert

ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾಗಿದೆ. ಹೀಗಾಗಿ ಒಳನಾಡು ಭಾಗದಲ್ಲಿ ಚದುರಿದಂತೆ ಹಾಗೂ ಅಲ್ಲಲ್ಲಿ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆರೆಂಜ್ ಅಲರ್ಟ್
ಆರೆಂಜ್ ಅಲರ್ಟ್

By

Published : Jun 10, 2020, 8:54 PM IST

ಕೊಡಗು: ಜಿಲ್ಲೆಯಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಜೂನ್ 12 ರಂದು ಯೆಲ್ಲೋ ಹಾಗೂ 13 ಮತ್ತು 14 ರಂದು ಆರೆಂಜ್ ಅಲರ್ಟ್ ಘೋಷಿಸಿ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ತಿಳಿಸಿದೆ.

ಈಗಾಗಲೇ ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾಗಿದೆ. ಹೀಗಾಗಿ ಒಳನಾಡು ಭಾಗದಲ್ಲಿ ಚದುರಿದಂತೆ ಹಾಗೂ ಅಲ್ಲಲ್ಲಿ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 12 ರಂದು 64.5 ಮಿ.ಮೀಟರ್ ನಿಂದ 115.5 ಮಿ.ಮೀಟರ್ ಪ್ರಮಾಣದ ಮಳೆ ಬೀಳುವ ಸಾಧ್ಯತೆಗಳಿವೆ. ಆರೆಂಜ್ ಅಲರ್ಟ್‌ ಅವಧಿಯಲ್ಲಿ 115.6 ಮಿ.ಮೀಟರ್ ನಿಂದ 204.4 ಮಿ.ಮೀಟರ್ ಮಳೆ ಬೀಳುವ ಸಾಧ್ಯತೆಗಳು ಇರುವುದರಿಂದ ಜನತೆ ಎಚ್ಚರಿಕೆಯಿಂದ ಇರಲು ಮನವಿ ಮಾಡಿದೆ.

ವಿಪತ್ತು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶ

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಎದುರಾದರೆ ಜಿಲ್ಲಾಡಳಿತ ನೀಡಿರುವ 08272-221077 ತುರ್ತು ದೂರವಾಣಿ ಸಂಖ್ಯೆಗೆ ಕರೆ ಮಾಡಲು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ.

ABOUT THE AUTHOR

...view details