ಕರ್ನಾಟಕ

karnataka

ETV Bharat / state

ಕೇರಳದಿಂದ ಕೋಲಾರಕ್ಕೆ ಆಗಮಿಸಿದ 33 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢ! - Kolar Corona cases

ಕಳೆದ ಎರಡು ದಿನಗಳ ಹಿಂದೆ ಕೇರಳದಿಂದ ರಾಜ್ಯಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಕೋಲಾರ ಜಿಲ್ಲೆಯ ಕೆಜಿಎಫ್​ನಲ್ಲಿರುವ ನೂರ್ ನೀಸ್ ನರ್ಸಿಂಗ್ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಕೋವಿಡ್​ ವಕ್ಕರಿಸಿದೆ.

kolar
15 ವಿದ್ಯಾರ್ಥಿಗಳಿಗೆ ಕೊರೊನಾ

By

Published : Aug 30, 2021, 1:41 PM IST

Updated : Aug 30, 2021, 5:33 PM IST

ಕೋಲಾರ: ಕೇರಳದಿಂದ ಬಂದಿದ್ದ 33 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಕೇರಳದಿಂದ ವಿದ್ಯಾರ್ಥಿಗಳು ಜಿಲ್ಲೆಯ ಕೆಜಿಎಫ್​​ನಲ್ಲಿರುವ ನೂರ್ ನರ್ಸಿಂಗ್ ಕಾಲೇಜಿಗೆ ಬಂದಿದ್ದರು.

ನೂರ್ ನೀಸ್ ನರ್ಸಿಂಗ್ ಕಾಲೇಜಿನಲ್ಲಿ ಈ ಹಿಂದೆ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳೊಂದಿಗೆ, ಹೊಸದಾಗಿ ಕಾಲೇಜಿಗೆ ಸೇರ್ಪಡೆಯಾಗಲು, ಕೇರಳ ಮೂಲದ ಸುಮಾರು 200 ವಿದ್ಯಾರ್ಥಿಗಳು ಕೆಜಿಎಫ್​ಗೆ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಿದಾಗ‌ ಅವರಲ್ಲಿ 33 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇವರು ಕಾಲೇಜಿನಲ್ಲಿರುವ ಸ್ಥಳೀಯ ವಿದ್ಯಾರ್ಥಿಗಳೊಂದಿಗೂ ಸಂಪರ್ಕದಲ್ಲಿದ್ದರು‌. ಇದೀಗ ಸೋಂಕು ಕಾಣಿಸಿಕೊಂಡಿರುವ ಪರಿಣಾಮ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ. ಸೋಂಕು ಕಾಣಿಸಿಕೊಂಡ ವಿದ್ಯಾರ್ಥಿಗಳನ್ನು ಕೋವಿಡ್​​ ಕೇರ್ ಸೆಂಟರ್​ಗೆ ಶಿಫ್ಟ್ ಮಾಡಲಾಗಿದೆ. ಅಲ್ಲದೆ ಕೆಲವರನ್ನು ಬಿಜಿಎಂಎಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ನೂರ್ ನೀಸ್ ನರ್ಸಿಂಗ್ ಕಾಲೇಜನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಲಾಗಿದ್ದು, ಸೀಲ್​ಡೌನ್ ಮಾಡಲಾಗಿದೆ.

ಮತ್ತಷ್ಟು ಮಂದಿಯಲ್ಲಿ ಸೋಂಕು ಕಾಣಿಕೊಳ್ಳುವ ಆತಂಕ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ವಿದ್ಯಾರ್ಥಿಗಳ ಟ್ರಾವೆಲ್ ಹಿಸ್ಟರಿಯನ್ನ ಸಹ ಕಲೆ ಹಾಕಲಾಗುತ್ತಿದೆ.

Last Updated : Aug 30, 2021, 5:33 PM IST

ABOUT THE AUTHOR

...view details