ಕರ್ನಾಟಕ

karnataka

ETV Bharat / state

ಕೆಜಿಎಫ್​​​ನಲ್ಲಿ 450 ಕೆಜಿ ಗಾಂಜಾ ವಶ: ಆರೋಪಿಗಳ ಬಂಧನ - marijuana news

ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಗಾಂಜಾ ಸಂಗ್ರಹಿಸಿದ್ದ ಪ್ರಮುಖ ಆರೋಪಿಗಳನ್ನ ಬಂಧಿಸುವಲ್ಲಿ ಕೆಜಿಎಫ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಗಳ ಬಂಧನ
ಆರೋಪಿಗಳ ಬಂಧನ

By

Published : Oct 13, 2020, 10:48 AM IST

ಕೋಲಾರ:ಜಿಲ್ಲೆಯ ಕೆಜಿಎಫ್ ನಗರದ ಕೃಷ್ಣಗಿರಿ ಲೈನ್​ನಲ್ಲಿರುವ ಮನೆಯ ಸುತ್ತಮುತ್ತ ಸುಮಾರು ಎರಡು ಕೋಟಿ ರೂಪಾಯಿಗಿಂತಲೂ ಅಧಿಕ ಮೌಲ್ಯದ ಗಾಂಜಾವನ್ನ ಸಂಗ್ರಹಿಸಲಾಗಿತ್ತು.

ಈ ಹಿನ್ನೆಲೆ ಕೆಜಿಎಫ್ ನಗರದ ಕೃಷ್ಣಗಿರಿ ಲೈನ್​ನ ನಿವಾಸದ ಮೇಲೆ ಎರಡು ಬಾರಿ ದಾಳಿ ಮಾಡಿದ ಕೆಜಿಎಫ್ ಪೊಲೀಸರು, ಸುಮಾರು 450 ಕೆಜಿ ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರು ಮಂದಿ ಆರೋಪಿಗಳು ಪರಾರಿಯಾಗಿದ್ದಾರೆ.

ಆರೋಪಿಗಳ ಪತ್ತೆಗಾಗಿ ಕೆಜಿಎಫ್ ಎಸ್ಪಿ ಇಲಕ್ಕಿಯಾ ಕರುಣಾಗರನ್ ವಿಶೇಷ ತಂಡಗಳನ್ನ ರಚನೆ ಮಾಡಿದ್ರು. ಕಾರ್ಯಾಚರಣೆಗೆ ಮುಂದಾದ ಪೊಲೀಸರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಸಂಬಂಧ ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details