ಕರ್ನಾಟಕ

karnataka

ETV Bharat / state

ನೀರಲ್ಲಿ ಮುಳುಗಿ 6 ವಿದ್ಯಾರ್ಥಿಗಳ ಸಾವು: ರಾಜ್ಯ ಸರ್ಕಾರದಿಂದ ತಲಾ ₹2.5 ಲಕ್ಷ ಪರಿಹಾರ - 6 students died at lake

ಜಿಲ್ಲೆಯಲ್ಲಿ ಗಣಪತಿ ನಿಮಜ್ಜನೆ ವೇಳೆ ಕೆರೆಯಲ್ಲಿ ಮುಳುಗಿ 6 ಮಕ್ಕಳು ಮೃತಪಟ್ಟ ಘಟೆನೆಗೆ ಸಂಬಂಧಿಸಿದಂತೆ ಪ್ರತಿ ಮಗುವಿನ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಧನ ಘೋಷಿಸಿದೆ.

ನೀರಿನಲ್ಲಿ ಮುಳುಗಿ 6 ವಿದ್ಯಾರ್ಥಿಗಳ ಸಾವು: ತಲಾ ₹2.5ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

By

Published : Sep 10, 2019, 9:35 PM IST

ಕೋಲಾರ: ಗಣಪತಿ ನಿಮಜ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ 6 ಶಾಲಾಮಕ್ಕಳ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ₹ 2 ಲಕ್ಷ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಕಲ್ಯಾಣ ನಿಧಿಯಿಂದ ₹ 50 ಸಾವಿರ ಪರಿಹಾರ ಧನವನ್ನು ಸರ್ಕಾರ ಪ್ರಕಟಿಸಿದೆ.

ನೀರಿನಲ್ಲಿ ಮುಳುಗಿ 6 ವಿದ್ಯಾರ್ಥಿಗಳ ಸಾವು: ತಲಾ ₹2.5ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಕೆಜಿಎಫ್​ನ ಕ್ಯಾಸಂಬಳ್ಳಿ ಹೋಬಳಿಯ ಮರಡ ಘಟ್ಟ ಗ್ರಾಮದ ಕೆರೆಯಲ್ಲಿ ಗಣಪತಿ ನಿಮಜ್ಜನೆ ಮಾಡುವಾಗ ನೀರಿನಲ್ಲಿ ಮುಳುಗಿ ಈ ಅನಾಹುತ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿ ಮಗುವಿನ ಕುಟುಂಬಕ್ಕೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೋಲಾರ ಜಿಲ್ಲಾಧಿಕಾರಿಗಳಿಗೆ ಸಿಎಂ ಆದೇಶ ಹೊರಡಿಸಿದ್ದಾರೆ.

ತಲಾ ₹2.5ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಮುಖ್ಯಮಂತ್ರಿ ಸೂಚನೆ ಮೇರೆಗೆಗೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆಯಿಂದ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.

ABOUT THE AUTHOR

...view details