ಕೋಲಾರ: 5 ವರ್ಷದ ಮಗುವಿನ ಮೇಲೆ 60 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಬಳಿಕ ವಿಷ ಸೇವಿಸಿರುವ ಘಟನೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
5 ವರ್ಷದ ಬಾಲಕಿ ಮೇಲೆ 60 ವರ್ಷದ ವ್ಯಕ್ತಿಯಿಂದ ಅತ್ಯಾಚಾರ ಯತ್ನ, ವಿಷ ಸೇವನೆ - 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ
5 ವರ್ಷದ ಬಾಲಕಿಗೆ ಚಾಕೋಲೆಟ್ ಆಸೆ ತೋರಿಸಿ 60 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಕೋಲಾರದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಅರೋಪಿಯು ಬಾಲಕಿಗೆ ಚಾಕೋಲೆಟ್ ಆಸೆ ತೋರಿಸಿ ಅತ್ಯಾಚಾರ ಯತ್ನ ನಡೆಸಿದ್ದಾನೆ ಎನ್ನಲಾಗಿದೆ. ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಂತರ ಆರೋಪಿಯು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.