ಕೋಲಾರ: ನಾಗರ ಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕರಪನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಹೊಲದಲ್ಲಿ ಕೆಲಸ ಮಾಡುವ ವೇಳೆ ಹಾವು ಕಚ್ಚಿ ರೈತ ಸಾವು - A farmer death by snake bite
ನಾಗರ ಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕರಪನಹಳ್ಳಿ ಗ್ರಾಮದಲ್ಲಿ ಜರುಗಿದೆ.
ರೈತ ಸಾವು
ಗ್ರಾಮದ ದ್ಯಾವೀರಣ್ಣ (65) ಮೃತಪಟ್ಟಿರುವ ರೈತ. ಈತ ತನ್ನ ರಾಗಿ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ನಾಗರಹಾವು ಕಚ್ಚಿದೆ. ತಕ್ಷಣ ಆತನನ್ನ ಸ್ಥಳೀಯ ಅಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಘಟನೆ ಬೆಮೆಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.