ಕೋಲಾರ: ಕಟ್ಟಡ ಕಾಮಗಾರಿ ವೇಳೆ 11 ಕೆವಿ ವಿದ್ಯುತ್ ತಂತಿ ತಗುಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಕೋಲಾರ: ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ - kolar building worker dies
ಕಟ್ಟಡ ಕಾಮಗಾರಿ ವೇಳೆ 11 ಕೆವಿ ವಿದ್ಯುತ್ ತಂತಿ ತಗುಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ನಗರದಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ಕಾರ್ಮಿಕ ಬಲಿ, ಮತ್ತೊಬ್ಬ ಗಂಭೀರ
ನಗರದ ಕನಕನಪಾಳ್ಯದ ಬಳಿ ಓಂಕಾರ್ ಮೆಡಿಕಲ್ಸ್ನ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಕಟ್ಟಡದ ಮೇಲೆ ಕಬ್ಬಿಣದ ಕಂಬಿಗಳನ್ನು ಸಾಗಿಸುವ ವೇಳೆ ವಿದ್ಯುತ್ ತಂತಿ ತಗುಲಿ ಕೋಲಾರ ತಾಲೂಕು ಹೊಗರಿ ಗ್ರಾಮದ ಕಾರ್ಮಿಕ ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಜೊತೆಗೆ ಮತ್ತೊಬ್ಬ ಕಾರ್ಮಿಕ ಕೃಷ್ಣಪ್ಪ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.