ಕರ್ನಾಟಕ

karnataka

ETV Bharat / state

ಒಂದೇ ಮರ,ಒಂದೇ ವೇಲ್‌, ಸಾವಿನಲ್ಲಿ ಒಂದಾದ ಅಮರ ಪ್ರೇಮಿಗಳು!

ಜಿಲ್ಲೆಯ ಮುಳಬಾಗಿಲು ತಾಲ್ಲೂಕು ದೇವರಾಯಸಮುದ್ರ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಮರವೊಂದಕ್ಕೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ.

ನೇಣಿಗೆ ಶರಣಾದ ಪ್ರೇಮಿಗಳು

By

Published : Jun 1, 2019, 11:16 PM IST

ಕೋಲಾರ:ಮರಕ್ಕೆ ನೇಣು ಹಾಕಿಕೊಂಡಿರುವ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ದೇವರಾಯಸಮುದ್ರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣ ಅನುಮಾನಕ್ಕೆ ಕಾರಣವಾಗಿದೆ.

ನೇಣಿಗೆ ಶರಣಾದ ಪ್ರೇಮಿಗಳ ಶವ

ಮೃತಪಟ್ಟವರವನ್ನು ಶ್ರೀನಿವಾಸಪುರದ ವರಲಕ್ಷ್ಮೀ ಹಾಗು ಸುರೇಶ್​ ಎಂದು ಗುರುತಿಸಲಾಗಿದೆ.

ಸುರೇಶ್‌ ಕೋಲಾರ ತಾಲ್ಲೂಕು ಪಚ್ಚಾರ್ಲಹಳ್ಳಿಯ ನಿವಾಸಿಯಾಗಿದ್ದಾನೆ. ದೇವರಾಯಸಮುದ್ರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲಿರುವ ಶಂಕರ ರೆಡ್ಡಿ ಎನ್ನುವವರ ಪಂಚವಟಿ ಫಾರಂನಲ್ಲಿ ಕೆಲಸ ಮಾಡುವ ಅನಸೂಯಮ್ಮ ಎಂಬಾಕೆ ತೋಟದಲ್ಲಿ ಓಡಾಡುತ್ತಿದ್ದರು. ಈ ವೇಳೆ ಮರವೊಂದರಲ್ಲಿ ಇಬ್ಬರ ಶವ ಕೊಳೆತ ಸ್ಥಿತಿಯಲ್ಲಿರುವುದನ್ನು ಅವರು ಗಮನಿಸಿದ್ದಾರೆ. ತಕ್ಷಣ ಅವರು ಮುಳಬಾಗಿಲು ಗ್ರಾಮಾಂತರ ಪೊಲೀಸ್​ ಠಾಣೆಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ಯುವಕ ಮತ್ತು ಯುವತಿ ಕಾಣೆಯಾಗಿರುವ ಬಗ್ಗೆ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ಮೇ 22 ರಂದೆ ದೂರು ದಾಖಲಾಗಿದ್ದು, ಅಂದೇ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಆತ್ಮಹತ್ಯೆಗೆ ಕಾರಣವೇನು? ಸಾವಿನ ಹಿಂದಿನ ರಹಸ್ಯವೇನು? ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಜಾಹ್ನವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For All Latest Updates

TAGGED:

ABOUT THE AUTHOR

...view details