ಕರ್ನಾಟಕ

karnataka

ETV Bharat / state

ಕೋರ್ಟ್​​​ ಹಾಲ್​​ನಲ್ಲೇ ಆತ್ಯಹತ್ಯೆ ಯತ್ನ ಮಾಡಿದ ವ್ಯಕ್ತಿ - ನ್ಯಾಯಾಧೀಶರ ಮುಂದೆ ವ್ಯಕ್ತಿ ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಕೋಲಾರದಲ್ಲಿ ನಡೆದಿದೆ.

Suicide attempt
Suicide attempt

By

Published : Apr 6, 2021, 8:32 PM IST

ಕೋಲಾರ: ನ್ಯಾಯಾಧೀಶರ ಮುಂದೆಯೇ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಕೋಲಾರದಲ್ಲಿ ಜರುಗಿದೆ‌. ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದಲ್ಲಿರುವ ನ್ಯಾಯಾಲಯದಲ್ಲಿ ಈ ಘಟನೆ ಜರುಗಿದ್ದು, ರವಿಕುಮಾರ್ (40) ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಈತನ ಪತ್ನಿ ಜೀವನಾಂಶಕ್ಕಾಗಿ ಧಾವೆ ಹೂಡಿದ್ದಳು. ಹೀಗಾಗಿ ಕೆಲವು ದಿನಗಳಿಂದ ಪತ್ನಿಯಿಂದ ದೂರವಿದ್ದ ವ್ಯಕ್ತಿ, ಇತ್ತೀಚೆಗೆ ತನ್ನ ತಾಯಿ ಅನಾರೋಗ್ಯದಿಂದ ಇದ್ದ ಕಾರಣ ಆಕೆಗೆ ಚಿಕಿತ್ಸೆ ಕೊಡಿಸಲು ಹಣವಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು ಎನ್ನಲಾಗಿದೆ. ಈ ಮಧ್ಯೆ ಪತ್ನಿ ನ್ಯಾಯಾಲಯದಲ್ಲಿ ಜೀವನಾಂಶಕ್ಕಾಗಿ ಧಾವೆ ಹೂಡಿದ್ದು, ಪತ್ನಿಗೆ ಜೀವನಾಂಶ ನೀಡಲು ಆಗದೇ ನ್ಯಾಯಾಧೀಶರ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತಕ್ಷಣ ಈತನನ್ನ ನ್ಯಾಯಾಲಯದ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನು ಘಟನೆ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ABOUT THE AUTHOR

...view details