ಕೋಲಾರ:ನಗರದ ಚನ್ನಯ್ಯ ರಂಗಮಂದಿರದಲ್ಲಿ ಇಂದು ಕೋಲಾರ ಜಿಲ್ಲಾಡಳಿತ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕುರಿತು ಜಿಲ್ಲೆಯ ವಿದ್ಯಾರ್ಥಿಗಳಿಗೆ ಒಂದು ದಿನದ ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಕೋಲಾರದಲ್ಲಿ ಉಚಿತ ಕಾರ್ಯಾಗಾರ - ನಂದಿನಿ ಅವರನ್ನು ಜಿಲ್ಲಾಧಿಕಾರಿಗಳು ಸನ್ಮಾನಿಸಿದರು
ವಿದ್ಯಾರ್ಥಿಗಳು ಹಾಗು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರಿಗಾಗಿ ಕೋಲಾರ ಜಿಲ್ಲಾಡಳಿತ ವತಿಯಿಂದ ಒಂದು ದಿನದ ವಿಶೇಷ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜೆ.ಮಂಜುನಾಥ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುತ್ತಿರುವ ನಿರುದ್ಯೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವಂತೆ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿದ್ದು, ಅವರ ಮೂಲಕ ಈ ಕಾರ್ಯಗಾರವನ್ನು ಯಶಸ್ವಿಯಾಗಿ ನಡೆಸಿದರು.
2017ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಕೋಲಾರ ಜಿಲ್ಲೆಯವರೇ ಆದ ನಂದಿನಿ ಅವರನ್ನು ಜಿಲ್ಲಾಧಿಕಾರಿಗಳು ಸನ್ಮಾನಿಸಿದರು. ಇನ್ನು ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಾಗಾರದ ಅನುಕೂಲವನ್ನು ಪಡೆದುಕೊಂಡರು.